ಆ.15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ: ತಜ್ಞರ ಊಹೆ- ಡಾ. ಕೆ. ಸುಧಾಕರ್ 

ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಬಹುದು ಎಂದು ತಜ್ಞರು ಊಹಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್

ಬಳ್ಳಾರಿ: ಆಗಸ್ಟ್ 15ರ ನಂತರ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಬಹುದು ಎಂದು ತಜ್ಞರು ಊಹಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 3000 ಸಕ್ರಿಯ ಪ್ರಕರಣಗಳಲ್ಲಿ ಶೇ, 97 ರಷ್ಟು ರೋಗಲಕ್ಷಣವಿಲ್ಲದ ಪ್ರಕರಣಗಳಾಗಿವೆ. ಇತರ ರಾಷ್ಟ್ರಗಳು ಮತ್ತು ರಾಜ್ಯಗಳನ್ನು ಅಧ್ಯಯನ ಮಾಡಿರುವ ತಜ್ಞರು ಆಗಸ್ಟ್ 15ರ ನಂತರ ಕರ್ನಾಟಕದಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಈ ಊಹಿಸಿದ್ದಾರೆ ಎಂದರು.

ಜ್ವರದ ಲಕ್ಷಣಗಳನ್ನು ಹೊಂದಿದವರೇ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ಗೆ ಬಲಿಯಾಗುತ್ತಿರುವುದರಿಂದ ಅಂತಹ ಲಕ್ಷಣಗಳ್ಳುವರನ್ನು ಪ್ರತ್ಯೇಕಿಸಿ ಪರೀಕ್ಷಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನಿನ್ನೆಯವರೆಗೂ ರಾಜ್ಯದಲ್ಲಿ ಕೊರೋನಾದಿಂದ 72 ಮಂದಿ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 6,245ಕ್ಕೆ ಏರಿಕೆ ಆಗಿದೆ. 2, 976 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3185 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ. ಈ ಪೈಕಿ 10 ರೋಗಿಗಳು ಐಸಿಯುನಲ್ಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com