ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಹಾಸನ ಮೂಲದ ಸಿಆರ್‌ಪಿಎಫ್‌ ಯೋಧ ಸಾವು

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಹಾಸನ ಮೂಲದ ಸಿಆರ್‌ಪಿಎಫ್‌ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಡದ ಸುಕ್ಮಾ ಕ್ಯಾಂಪ್​​ನಲ್ಲಿ ನಡೆದಿದೆ.
ಯೋಧ ಹೇಮಂತ್ ಕುಮಾರ್
ಯೋಧ ಹೇಮಂತ್ ಕುಮಾರ್

ಹಾಸನ: ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಹಾಸನ ಮೂಲದ ಸಿಆರ್‌ಪಿಎಫ್‌ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಡದ ಸುಕ್ಮಾ ಕ್ಯಾಂಪ್​​ನಲ್ಲಿ ನಡೆದಿದೆ.

ಹಾಸನ ಜಿಲ್ಲೆ ಹಾಸನ ತಾಲೂಕಿನ ಈಚಲಹಳ್ಳಿ ಗ್ರಾಮದವರಾಗಿದ್ದ ಯೋಧ ಹೇಮಂತ್‌ಕುಮಾರ್ (42) ಸಿಆರ್‌ಪಿಎಫ್‌ನಲ್ಲಿ ಕರ್ತವ್ಯದಲ್ಲಿದ್ದರು. ಛತ್ತಿಸಗಡದ ಸುಕ್ಮಾದಲ್ಲಿ 150ನೇ ಸಿಆರ್‌ಪಿಎಫ್‌ ಬೆಟಾಲಿಯನ್‌ ಯೋಧರಾಗಿದ್ದ ಹೇಮಂತ್‌ಕುಮಾರ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯೋಧ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಇನ್ನು ಕೇವಲ ಹತ್ತು ತಿಂಗಳಿನಲ್ಲಿ ನಿವೃತ್ತರಾಗಲಿದ್ದರೆಂದು ತಿಳಿದುಬಂದಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ವಿಶೇಷವೆಂದರೆ "ತಾನು ಇನ್ನೆರಡು ತಿಂಗಳು ಸೇವೆ ಸಲ್ಲಿಸಿ ನಿವೃತ್ತಿಯಾಗಿ ಮನೆಗೆ ಬರುವುದಾಗಿ' ತಿಳಿಸಿದ್ದ ಹೇಮಂತ್‌ಕುಮಾರ್ ಜೀವನದಲ್ಲಿ ವಿಧಿ ಬೇರೆಯದೇ ಆಟವಾಡಿದೆ. ಇನ್ನೊಂದೆರಡು ದಿನಗಳಲ್ಲಿ ಯೋಧನ ಮೃತದೇಹ ಸ್ವಗ್ರಾಮಕ್ಕೆ ಬರಲಿದ್ದು ಕುಟುಂಬ, ಬಂಧುಗಳ ಶೋಕ ಮುಗಿಲು ಮುಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com