ಕೆನಡಾ ವಾಟರ್ ನೆಕ್ಸ್ಟ್ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆ

ಕೆನಡಾ ವಾಟರ್ ಶೃಂಗಸಭೆಯು ಕೊಡಮಾಡುವ ವಾಟರ್ ನೆಕ್ಸ್ಟ್ 2020 ವಾರ್ಷಿಕ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆಯಾಗಿದ್ದಾರೆ.

Published: 14th June 2020 07:57 PM  |   Last Updated: 14th June 2020 07:57 PM   |  A+A-


chitra

ಚಿತ್ರ ಗೌಡ

Posted By : lingaraj
Source : UNI

ಬೆಂಗಳೂರು: ಕೆನಡಾ ವಾಟರ್ ಶೃಂಗಸಭೆಯು ಕೊಡಮಾಡುವ ವಾಟರ್ ನೆಕ್ಸ್ಟ್ 2020 ವಾರ್ಷಿಕ ಪ್ರಶಸ್ತಿಗೆ ಕನ್ನಡತಿ ಚಿತ್ರ ಗೌಡ ಆಯ್ಕೆಯಾಗಿದ್ದಾರೆ.

ನೀರಿನ ಕಾರ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಮತ್ತು ಯೋಜನೆಗಳ ಮೂಲಕ ಮಹತ್ವದ ಕೊಡುಗೆ ನೀಡಿದ ಸಾಧಕರನ್ನು ಗುರುತಿಸಿ ನೀಡುವ ಈ ಪ್ರಶಸ್ತಿ ಮೊಟ್ಟ ಮೊದಲ ಬಾರಿಗೆ ಕನ್ನಡಿಗರೊಬ್ಬರಿಗೆ ಸಂದಿರುವುದು ವಿಶೇಷವಾಗಿದೆ.

ಚಿತ್ರ ಗೌಡ , ಹಾಸನದ ಚನ್ನರಾಯಪಟ್ಟಣ ತಾಲ್ಲೂಕಿನ ತಗಡೂರು ಗ್ರಾಮದ (ಪುರುದೇಗೌಡರ ಮನೆ) ಡಾ.ಹಾಲಪ್ಪಗೌಡ ಮತ್ತು ರತ್ನಮ್ಮ ಅವರ ಪುತ್ರಿ. ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಪರಿಸರ ಎಂಜಿನಿಯರಿಂಗ್ ಮುಗಿಸಿದ ಚಿತ್ರ, ಉದ್ಯೋಗ ನಿಮಿತ್ತ ಕೆನಡಾದಲ್ಲಿ ನೆಲೆಸಿದ್ದಾರೆ.

ನೀರು ಸಂರಕ್ಷಣೆ, ಜಲಾನಯನ ಮೇಲ್ವಿಚಾರಣೆ ಮತ್ತು ಯೋಜನೆ, ಹವಾಮಾನ ಬದಲಾವಣೆಯ ಮೌಲ್ಯಮಾಪನ, ನೀರಿನ ನೀತಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಸಂಬಂಧಿಸಿದಂತೆ ಕೆನಡಾದಲ್ಲಿ ಪ್ರಾಂತೀಯ ಸರ್ಕಾರ, ಪುರಸಭೆ ಮತ್ತು ಸಂಘ ಸಂಸ್ಥೆಗಳ ಜೊತೆಯಲ್ಲಿ ಸುಮಾರು 20 ವರ್ಷಗಳಿಂದ ಚಿತ್ರ ಕೆಲಸ ಮಾಡುತ್ತಿದ್ದಾರೆ.

ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಚಿತ್ರ, ಈ ಸಾಧನೆ ಗೌರವವನ್ನು ತಂದೆ ಹಾಲಪ್ಪಗೌಡ ಅವರಿಗೆ ಸಮರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp