ಮಥುರಾದ ಕ್ವಾರಂಟೈನ್ ಕೇಂದ್ರದಲ್ಲಿದ್ದ ದಕ್ಷಿಣ ಕನ್ನಡದ ಯೋಧ ಹೃದಯಾಘಾತದಿಂದ ಸಾವು

ಭಾರತೀಯ ಸೇನೆಯಲ್ಲಿ ಕರ್ತವ್ಯನಿರತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸಂದೇಶ್ ಶೆಟ್ಟಿ ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಂದೇಶ್ ಶೆಟ್ಟಿ
ಸಂದೇಶ್ ಶೆಟ್ಟಿ

ಮಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯನಿರತರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸಂದೇಶ್ ಶೆಟ್ಟಿ ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಂದೇಶ್ ಶೆಟ್ಟಿ ಅವರಿಗೆ 34 ವರ್ಷ ವಯಸ್ಸಾಗಿತ್ತು. ಲಾಕ್ ಡೌನ್ ನಿಂದ ಬೆಳ್ತಂಗಡಿಯ ಮನೆಯಲ್ಲೇ ಇದ್ದ ಅವರು ಕಳೆದ ಸೋಮವಾರ ಕರ್ತವ್ಯಕ್ಕೆ ಮರಳಿದ್ದರು.

ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ವಿಮಾನಯಾನ ಮಾಡಿದ ಕಾರಣಕ್ಕೆ ಅವರನ್ನು ಮಥುರಾದಲ್ಲಿನ ಕ್ವಾರಂಟೈನ್‌ ಕೇಂದ್ರದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಶುಕ್ರವಾರ ಮಧ್ಯರಾತ್ರಿ 12.30ರ ವೇಳೆಗೆ ಹೃದಯಾಘಾತಕ್ಕೊಳಗಾದರು. ಅವರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ನಿಧನರಾದರೆಂದು ತಿಳಿದು ಬಂದಿದೆ.

ಕಳೆದ 14 ವರ್ಷಗಳಿಂದ ಭಾರತೀಯ ಭೂ ಸೇನಾ ಸಿಗ್ನಲ್‌ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಗೋವಾ, ದೆಹಲಿ, ಜಮ್ಮು ಹಾಗೂ ಉತ್ತರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com