ಕೊಪ್ಪಳ: ಕೊರೋನಾಗೆ‌ ಜಿಲ್ಲೆಯ‌ ಮೊದಲ ಬಲಿ ಗಂಗಾವತಿಯಲ್ಲಿ

ಗ್ರೀನ್ ಝೋನ್ ಪಟ್ಟಿಯಲ್ಲಿ ಇದ್ದ ಕೊಪ್ಪಳ ಜಿಲ್ಲೆಯಲ್ಲಿ ವಲಸಿಗರಿಂದಾಗಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳ ವಾಗಿದ್ದು, ಇದೀಗ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಂಗಾವತಿ: ಗ್ರೀನ್ ಝೋನ್ ಪಟ್ಟಿಯಲ್ಲಿದ್ದ ಕೊಪ್ಪಳ ಜಿಲ್ಲೆಯಲ್ಲಿ ವಲಸಿಗರಿಂದಾಗಿ ಕೊರೋನಾ ಸೋಂಕಿನ ಪ್ರಕರಣ ಹೆಚ್ಚಳವಾಗಿದ್ದು, ಇದೀಗ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ.

ಗಂಗಾವತಿ ತಾಲ್ಲೂಕಿ‌ನ ಮರಳಿ ಗ್ರಾಮದ 47 ವರ್ಷದ ಮಹಿಳೆ ಕೊರೋನಾ ವೈರಸ್ ನಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಟುಂಬ ಮೂಲಗಳು ದೃಢಪಡಿಸಿವೆ.

ಮರಳಿ ಗ್ರಾಮದ ದಂಪತಿಗಳಲ್ಲಿ  ಜೂ.15ರಂದು ಸೋಂಕು ದೃಢಪಟ್ಟಿತ್ತು. ಬಳಿಕ ಸೋಂಕಿತರನ್ನು ಕೊಪ್ಪಳದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಮಹಿಳೆಯ ಆರೋಗ್ಯದಲ್ಲಿ ಬುಧವಾರ ದಿಢೀರ್ ಸಮಸ್ಯೆ ಕಾಣಿಸಿಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಇದೀಗ ಮೃತರ ಅಂತ್ಯ ಸಂಸ್ಕಾರ ಕೋವಿಡ್-19 ವಿಧಾನಗಳಂತೆ ನಡೆಯಲಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಿದ್ಧತೆ ಕೈಗೊಂಡಿದ್ದಾರೆ.

-ಶ್ರೀನಿವಾಸ್ ಎಂ ಜೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com