ಕೋಲಾರ: ಆರೋಪಿಗೆ ಕೊರೋನಾ ಪಾಸಿಟಿವ್; 22 ಪೊಲೀಸರಿಗೆ ಕ್ವಾರಂಟೈನ್

ಜಿಲ್ಲೆಯ ಮುಳಬಾಗಿಲಿನ ಆರೋಪಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿವೈಎಸ್ ಪಿ ನಾರಾಯಣಸ್ವಾಮಿ ಮತ್ತು ಪಿಎಸ್ ಐ ಶ್ರೀನಿವಾಸ್ ಅವರು ಕೂಡ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲಾರ:  ಜಿಲ್ಲೆಯ ಮುಳಬಾಗಿಲಿನ ಆರೋಪಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿವೈಎಸ್ ಪಿ ನಾರಾಯಣಸ್ವಾಮಿ ಮತ್ತು ಪಿಎಸ್ ಐ ಶ್ರೀನಿವಾಸ್ ಅವರು ಕೂಡ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಜೂನ್ 7 ರಂದು ಮುಳಬಾಗಿಲಿನಲ್ಲಿ ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣ ದಾಖಲಾಗಿತ್ತು. ಜೂನ್ 10 ರಂದು ಮೃತ ಮಹಿಳೆಯ ಪತಿಯನ್ನು ಬಂಧಿಸಿ ಠಾಣೆಗೆ ಕರೆ ತರಲಾಗಿತ್ತು. ನಂತರ ಆತನನ್ನು ಜೈಲಿನ ವಾರ್ಡ್ ಗೆ ಶಿಫ್ಟ್ ಮಾಡಿ ಪರೀಕ್ಷೆಗೊಳಪಡಿಸಲಾಗಿತ್ತು.

ಜೂನ್ 15 ರಂದು ಬಂದ ವರದಿಯಲ್ಲಿ ಆತನಿಗೆ ಕೊರೋನಾ ಪಾಸಿಟಿವ್ ಬಂದಿತ್ತು, ಹೀಗಾಗಿ ಆತನ ಸಂಪರ್ಕದಲ್ಲಿದ್ದ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.ಇನ್ನೂ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಠಾಣೆಗೆ ಸ್ಯಾನಿಟೈಸ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com