ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ: ನಿರ್ಧಾರ ಮರು ಪರಿಶೀಲಿಸಲು ಚುನಾವಣಾ ಆಯೋಗಕ್ಕೆ 'ಹೈ' ಸೂಚನೆ

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ. 

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ವಿಭಾಗೀಯ ನ್ಯಾಯಪೀಠ, ಆದೇಶವನ್ನು ಮರು ಪರಿಶೀಲನೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. 

ಮೇ.30 ರಂದು ಕೇಂದ್ರ ಸರ್ಕಾರ ಲಾಕ್'ಡೌನ್ ಸಡಿಲಗೊಳಿಸಿತ್ತು. ಈ ವೇಳೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿತ್ತು. ಜೂ.8ರಂದು ಮಸೀದಿ, ಚರ್ಚ್, ದೇವಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅದೇ ರೀತಿಯಾಗಿ ಚುನಾವಣಾ ಆಯೋಗ ಕೂಡ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ಹೊರಡಿಸಿರುವ ಆದೇಶವನ್ನು ಪುನರ್ ಪರಿಶೀಲಿಸುವ ನಿರ್ಧಾರದ ಬಗ್ಗೆ ಜು.1ರಂದು ತಿಳಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com