ವೈದ್ಯಕೀಯ ಕೋರ್ಸ್ ಶುಲ್ಕ ನಿಯಂತ್ರಣ ಸಮಿತಿಗೆ ನಿವೃತ್ತ ನ್ಯಾ. ಸುಭಾಷ್ .ಬಿ.ಡಿ ನೇಮಕ

ವೈದ್ಯಕೀಯ ಕೋರ್ಸ್ ಗಳ ಶುಲ್ಕ ನಿಗದಿಗಾಗಿ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಶುಲ್ಕ ನಿಗದಿಗಾಗಿ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷರನ್ನಾಗಿ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಡಿ ಸುಭಾಷ್ ಅವರನ್ನು ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಜಿಎಂ ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕವನ್ನು ನಿರ್ಧರಿಸುವುದು) ಕಾಯ್ದೆಯಡಿ ರಚಿಸಲಾದ ಸಮಿತಿಗೆ, ಒಂದು ವರ್ಷದವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೂ ಸುಭಾಷ್ ಅವರೇ ಅಧ್ಯಕ್ಷರಾಗಿರುತ್ತಾರೆ.

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಿರುವ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು. ಈ ವೇಳೆ ಶುಲ್ಕ ಹೆಚ್ಚಳ ಸಂಬಂಧ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿತ್ತು.

ಹುಬ್ಬಳ್ಳಿಯ  ದಿವಂಗತ ಜಿ.ಬಿ.ಕುಲಕರ್ಣಿ ಸ್ಮಾರಕ ಕಾನೂನು ಸಂಸ್ಥೆಯ ಅಧ್ಯಕ್ಷ ಡಾ.ವಿನೋದ್‌ ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯ ಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ.ನಟ ರಾಜ್‌ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com