ಇಂಗ್ಲೀಷ್ ಭಯದಿಂದ ತುಮಕೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ 1,457 ವಿದ್ಯಾರ್ಥಿಗಳು ಗೈರು

ಜಿಲ್ಲೆಯ 50ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸುಮಾರು 1,457 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಪರೀಕ್ಷಾ ಕೇಂದ್ರವೊಂದಕ್ಕೆ ಬಂದು ಪರಿಶೀಲನೆ ನಡೆಸುತ್ತಿರುವುದು
ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಪರೀಕ್ಷಾ ಕೇಂದ್ರವೊಂದಕ್ಕೆ ಬಂದು ಪರಿಶೀಲನೆ ನಡೆಸುತ್ತಿರುವುದು

ತುಮಕೂರು:ಜಿಲ್ಲೆಯ 50ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಸುಮಾರು 1,457 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಗೈರಾದವರಲ್ಲಿ ಬಹುತೇಕ ಮಂದಿ ಗ್ರಾಮೀಣ ಪ್ರದೇಶಗಳಿಂದ ಬಂದವರಾಗಿದ್ದು ಇಂಗ್ಲಿಷ್ ಭಾಷೆಯ ಬಗ್ಗೆ ಭೀತಿಯಿಂದ ಮತ್ತು ಕಳೆದ ಬಾರಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಆಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ನಿನ್ನೆ ಇಂಗ್ಲಿಷ್ ಪೂರಕ ಪರೀಕ್ಷೆಗೆ 24 ಸಾವಿರದ 970 ಮಂದಿ ವಿದ್ಯಾರ್ಥಿಗಳು ದಾಖಲಾಗಿದ್ದರು. ಅವರಲ್ಲಿ 23 ಸಾವಿರದ 513 ಮಂದಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯ 665 ಮಂದಿ ವಿದ್ಯಾರ್ಥಿಗಳಲ್ಲಿ 657 ಮಂದಿ ಮತ್ತು ಹೊರ ರಾಜ್ಯದ ಎಲ್ಲಾ 5 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಕೊರೋನಾ ಸಮಯದಲ್ಲಿ ನಿನ್ನೆ ಪರೀಕ್ಷೆಗೆ ಬರದ ಜಿಲ್ಲೆಯ ವಿದ್ಯಾರ್ಥಿಗಳ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮುಂಬರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವವರಿಗೆ ಮಾದರಿಯಾಗಿದ್ದಾರೆ ಎಂದು ಸರ್ವೋದಯ ಪಿಯುಸಿ ಕಾಲೇಜಿನಲ್ಲಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಎನ್ ಸಿಸಿ ಅಧಿಕಾರಿ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.

ಒಂದು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ ಕೆ ರಾಕೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com