ಸಿಬ್ಬಂದಿಯೋರ್ವನಲ್ಲಿ ಕೊರೋನಾ ಪತ್ತೆ: ಬೆಂಗಳೂರು ವಿಭಾಗೀಯ ರೈಲ್ವೇ ಕಚೇರಿ ಬಂದ್

ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗೀಯ ರೈಲ್ವೇ ಕಚೇರಿಯನ್ನು ಶುಕ್ರವಾರ ಬಂದ್ ಮಾಡಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಪತ್ತೆಯಾದ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗೀಯ ರೈಲ್ವೇ ಕಚೇರಿಯನ್ನು ಶುಕ್ರವಾರ ಬಂದ್ ಮಾಡಲಾಗಿದೆ. 

ಹೆಬ್ಬಾಳ ರೈಲ್ವೇ ವಿಭಾಗದ ಸ್ಟೇಷನ್ ಮಾಸ್ಟರ್ ಒಬ್ಬರಲ್ಲಿ ನಿನ್ನೆಯಷ್ಟೇ ಕೊರೋನಾ ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ವಿಭಾಗೀಯ ರೈಲ್ವೇ ಕಚೇರಿಯನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿಭಾಗೀಯ ರೈಲ್ವೇ ಕಚೇರಿಯಲ್ಲಿ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಜೂನ್.22ರ ಬಳಿಕೆ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ವರದಿಗಳು ತಿಳಿಸಿವೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಭಾಗೀಯ ರೈಲ್ವೇ ನಿರ್ವಾಹಕ ಎಕೆ. ವರ್ಮಾ ಅವರು, ಹೆಬ್ಬಾಳ ಸ್ಟೇಷನ್ ಮಾಸ್ಟರ್ ರಲ್ಲಿ ನಿನ್ನೆಯಷ್ಟೇ ವೈರಸ್ ಪತ್ತೆಯಾಗಿದೆ. ಸೋಂಕಿತ ರೈಲ್ವೇ ಮಾಸ್ಟರ್ ಕೆಲ ದಿನಗಳ ಹಿಂದಷ್ಟೇ ಬೆಂಗಳೂರು ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸುವ ಸಲುವಾಗಿ ಭೇಟಿ ನೀಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಚೇರಿಯನ್ನು ಬಂದ್ ಮಾಡಲಾಗಿದ್ದು, ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಕೆಲಸ ಮಾಡಲಾಗುತ್ತಿದೆ. ನಿಯಂತ್ರಣ ಕೊಠಡಿ ಹಾಗೂ ರೈಲುಗಳ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com