ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿ ಪ್ರತಿಭಟನೆಗೆ ಸಜ್ಜಾಗಿ: 'ಕೈ' ಶಾಸಕರಿಗೆ ಸಿದ್ದರಾಮಯ್ಯ ಕರೆ

ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯವ್ಯಾಪಿ ಹೋರಾಟ ನಡೆಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಮಾತನಾಡಿದ ಸಿದ್ದರಾಮಯ್ಯ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. 

ಸರ್ಕಾರದ ಕ್ರಮ ಖಂಡಿಸಿದ ಸಿದ್ದರಾಮಯ್ಯ ಜೈಲ್ ಭರೋ ಚಳವಳಿ ನಡೆಸುವ ಎಚ್ಚರಿಕೆ ನೀಡಿದ್ದಾರೆ. 'ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ಹೀಗಾಗಿ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಿದ್ದರಾಗಬೇಕು ಎಂದು ಕರೆ ನೀಡಿದ್ದಾರೆ.

ಭೂ ಸುಧಾರಣಾ ತಿದ್ದುಪಡಿ ಕಾಯಿದೆ ರದ್ದುಪಡಿಸಬೇಕೆಂದು ಒತ್ತಾಯಿಸಿ ಈ ಹಿಂದೆ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಭೂ ಸುಧಾರಣಾ ಕಾಯಿದೆ ತಿದ್ದುಪಡಿಯಿಂದಾಗಿ ಕೃಷಿ ಕ್ಷೇತ್ರದ  ಮತ್ತು ಗ್ರಾಮೀಣ ಆರ್ಥಿಕತೆ ಮೇಲೆ ಭಾರೀ ಹೊಡೆತ ಬೀಳಲಿದೆ ಎಂದು ಹೇಳಿದ್ದಾರೆ. ಈ ಸಂಬಂಧ ರೈತ ನಾಯಕರು ಹಾಗೂ ಇತರ ಪಕ್ಷದ ಶಾಸಕರ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com