ಆರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಆರು ಐಎಎಸ್‌ ಹಾಗೂ ಒಬ್ಬರು ಐಎಫ್‌ಎಸ್‌ ಅಧಿಕಾರಿಯನ್ನು ವರ್ಗಾಯಿಸಿ  ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

Published: 19th June 2020 12:20 PM  |   Last Updated: 19th June 2020 12:35 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : The New Indian Express

ಬೆಂಗಳೂರು: ಆರು ಐಎಎಸ್‌ ಹಾಗೂ ಒಬ್ಬರು ಐಎಫ್‌ಎಸ್‌ ಅಧಿಕಾರಿಯನ್ನು ವರ್ಗಾಯಿಸಿ  ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಎನ್‌.ನಾಗಾಂಬಿಕೆ ದೇವಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್‌ ಅವರನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. 

ಎನ್‌.ಜಯರಾಮ್‌ ಅವರನ್ನು ಜಲಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಹರ್ಷ ಗುಪ್ತ: ಭೂಮಾಪನಾ ಇಲಾಖೆಯ ಆಯುಕ್ತ. ಜತೆಗೆ ಐಎಂಎ ವಿಶೇಷ ಅಧಿಕಾರಿಯಾಗಿಯೂ ಮುಂದುವರಿಯಲಿದ್ದಾರೆ. 

ಎಚ್‌.ಬಸವರಾಜೇಂದ್ರ– ಪಶುಸಂಗೋಪನಾ ಇಲಾಖೆಯ ಆಯುಕ್ತ, ಡಾ.ಎನ್‌.ಶಿವಶಂಕರ್‌– ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ,  ಹೆಚ್ಚುವರಿಯಾಗಿ ಗಣಿ ಇಲಾಖೆಯ ನಿರ್ದೇಶಕ. ಐಎಫ್‌ಎಸ್‌ ಅಧಿಕಾರಿ ಡಾ.ಎಸ್‌.ಎರ್‌.ನಟೇಶ್‌– ಆನೆ ಯೋಜನೆಯ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp