ಕಳಪೆ ಬೀಜ ಮಾರಾಟಗಾರರ ಒತ್ತಡ ತಂತ್ರಗಳಿಗೆ ಮಣಿಯುವುದಿಲ್ಲ: ಬಿ.ಸಿ. ಪಾಟೀಲ್

ರೈತರಿಗೆ ಒಳ್ಳೆಯದು ಮಾಡುವುದೇ ನನ್ನ ಕರ್ತವ್ಯ. ನಕಲಿ ಕಳಪೆ ಬೀಜ ಗೊಬ್ಬರ ಮಾರಾಟಗಾರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಬಿ ಸಿ ಪಾಟೀಲ್
ಬಿ ಸಿ ಪಾಟೀಲ್

ಕೊಪ್ಪಳ: ರೈತರಿಗೆ ಒಳ್ಳೆಯದು ಮಾಡುವುದೇ ನನ್ನ ಕರ್ತವ್ಯ. ನಕಲಿ ಕಳಪೆ ಬೀಜ ಗೊಬ್ಬರ ಮಾರಾಟಗಾರರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಒತ್ತಡಕ್ಕೆ ಮಣಿಯುವುದು ತಾಯಿಯೇ ಮಗುವಿಗೆ ವಿಷವುಣಿಸಿದಂತೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದಲ್ಲಿಂದು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಕಳಪೆ ಬೀಜ ಮಾರಾಟ ಮಾಡುವ ದೊಡ್ಡ ಜಾಲವನ್ನು ನಾವು ಭೇದಿಸಿದ್ದೇವೆ. ಇನ್ನೂ ಭೇದಿಸುವುದು ಬಹಳಷ್ಟಿದೆ. ಕಳಪೆ ಬೀಜ ಮಾರಾಟ ಮಾಡುವವರ ಕತೆ ಮುಗಿಸುತ್ತೇವೆ. ಕಳಪೆ ಬೀಜ ಮಾರಾಟದವರ ಒತ್ತಡ ತಂತ್ರಗಳಿಗೆ ಯಾವುದೇ ಕಾರಣಕ್ಕೂ ಮಣಿಯುವುದಿಲ್ಲ. ಕಳಪೆ ಬೀಜ ಮಾರಾಟವನ್ನು ನಾವೇ ಪತ್ತೆ ಮಾಡುತ್ತಿದ್ದೇವೆ. ಇಷ್ಟು ವರ್ಷ ಅದು ಪತ್ತೆಯಾಗಿರಲಿಲ್ಲ. ಕಳಪೆ ಬೀಜದ ಬಗ್ಗೆ ಯಾರೂ ಕಾಳಜಿ ವಹಿಸಿರಲಿಲ್ಲ. ತಾವು ಕೃಷಿ ಸಚಿವರಾದ ಬಳಿಕ ಖುದ್ದಾಗಿ ಇಂತಹದೊಂದು ಅಭಿಯಾನ ಆರಂಭಿಸಿದ್ದೇವೆ. ರಾಯಚೂರು, ಬೀದರ, ಹಾವೇರಿ ಸೇರಿದಂತೆ ಇಲ್ಲಿಯವರೆಗೂ ಸುಮಾರು 15 ಕೋಟಿ ಮೊತ್ತದ ಕಳಪೆ ಬೀಜ ಪತ್ತೆ ಮಾಡಲಾಗಿದೆ ಎಂದರು.

ಅನ್ನ ಕೊಡುವ ರೈತನಿಗೆ ಯಾವುದೇ ಕಾರಣಕ್ಕೂ ಬಿತ್ತನೆ ಸಮಯದಲ್ಲಿ ಕಳಪೆ ಬೀಜ ಪೂರೈಕೆ ಆಗಬಾರದು. ಕಳಪೆ ಬೀಜದ ಜೊತೆಗೆ ಕಳಪೆ ನಕಲಿ ರಸಗೊಬ್ಬರ, ಔಷಧಿಯನ್ನು ಸೀಜ್ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಬೀಜ ಕಾಯಿದೆ ಪ್ರಕಾರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಎಚ್.ವಿಶ್ವನಾಥ್ ಅವರಿಗೆ ಮೇಲ್ಮನೆ ಸ್ಥಾನ ಕೈಬಿಟ್ಟಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ವಿಶ್ವನಾಥ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕೆನ್ನುವ ಒತ್ತಾಯ ಇದೆ. ಆರ್.ಶಂಕರ್, ಎಂಟಿಬಿ, ವಿಶ್ವನಾಥ್ ಮೂವರಿಗೂ ಮೇಲ್ಮನೆ ಸ್ಥಾನ ಸಿಗಲಿದೆ ಎಂಬ ಭರವಸೆಯಿತ್ತು. ಆದರೀಗ ಇಬ್ಬರಿಗೆ ಸಿಕ್ಕಿದೆ. ಇನ್ನೂ ನಾಲ್ಕೈದು ಸ್ಥಾ‌ನಗಳಿವೆ. ಸದ್ಯದಲ್ಲಿಯೇ ಇನ್ನೊಬ್ಬರಿಗೂ ಕೊಡಬಹುದು ಎಂದು ಉತ್ತರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com