ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸೋಂಕಿಲ್ಲ; ಸಚಿವ ಸುರೇಶ್‍ಕುಮಾರ್ ಸ್ಪಷ್ಟನೆ

ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ಈ ಹಿಂದೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಬರೆದಿದ್ದ ಬೆಂಗಳೂರಿನ  ಓರ್ವ ವಿದ್ಯಾರ್ಥಿನಿಯ ಆರೋಗ್ಯ  ಕುರಿತು ಕೆಲ ಗೊಂದಲ ನಿರ್ಮಾಣವಾಗಿತ್ತು. ಆ ವಿದ್ಯಾರ್ಥಿನಿಯ ಸ್ಯಾಂಪಲ್ Negative ಎಂದು ಫಲಿತಾಂಶ ಬಂದಿದೆ ಎಂದು ಆರೋಗ್ಯ ಇಲಾಖೆ  ಸ್ಪಷ್ಟ ಪಡಿಸಿದೆ. ಯಾವುದೇ ಆತಂಕಕ್ಕೆ ಆಸ್ಪದವಿಲ್ಲ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಅಂದರೆ ಜೂನ್​ 18 ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಬಿಇಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಇಂದು ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com