ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿಕೆ: ಮಾರ್ಗಸೂಚಿ ಪ್ರಕಟ

ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ‌.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ‌.

ಈ ಸಂಬಂಧ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ. ಆಡಳಿತಾಧಿಕಾರಿಯು ಗ್ರಾಮ ಪಂಚಾಯತಿಯ ಎಲ್ಲಾ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು ಚಲಾಯಿಸಬಹುದು. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ( ಗ್ರಾಮ ಪಂಚಾಯತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು, ಗ್ರಾಮ ಪಂಚಾಯತಿಯ ಹಣಕಾಸಿನ ವ್ಯವಹಾರವನ್ನು ಆಡಳಿತಾಧಿಕಾರಿ ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ನಿರ್ವಹಿಸಬೇಕು. ವಾರ್ಡ್ ಸಭೆ ಮತ್ತು ಗ್ರಾಮ ಸಭೆಗಳನ್ನು ಕಾಲ ಕಾಲಕ್ಕೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಆಡಳಿತಾಧಿಕಾರಿಯು ಗ್ರಾಮ ಪಂಚಾಯತಿ ಪ್ರಕಾರ್ಯಗಳನ್ನು ನೆರವೇರಿಸಬಹುದಾಗಿದೆ.

ಆಡಳಿತಾಧಿಕಾರಿ ಗ್ರಾಮ ಪಂಚಾಯತಿಯ ಸಾಮಾನ್ಯ ಅಧಿಕಾರಗಳನ್ನು ಚಲಾಯಿಸಬಹುದಾಗಿದ್ದು, ಗ್ರಾಮಪಂಚಾಯಿತಿ ಅಧ್ಯಕ್ಷನ ಪ್ರಕಾರ್ಯಗಳು ಮತ್ತು ಅಧಿಕಾರಗಳನ್ನು ಸಹ ಆಡಳಿತಾಧಿಕಾರಿ ಚಲಾಯಿಸಲು ಹಕ್ಕು ನೀಡಲಾಗಿದೆ. ಕೋವಿಡ್ -19 ( ಕೊರೊನಾ ವೈರಸ್ ) ಹರಡದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಗ್ರಾಮ ಪಂಚಾಯತಿ ಮಟ್ಟದ ಕಾರ್ಯಪಡೆಗೆ ಆಡಳಿತಾಧಿಕಾರಿಯು ಅಧ್ಯಕ್ಷರಾಗಿ ಕಾರ್ಯಪಡೆಯ ಕರ್ತವ್ಯಗಳನ್ನು ನಿರ್ವಹಿಸಬೇಕು. 

ಗ್ರಾಮ ಪಂಚಾಯತಿ ಗ್ರಂಥಾಲಯಗಳ ನಿರ್ವಹಣೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಲಾಗಿದ್ದು , ಗ್ರಾಮ ಪಂಚಾಯತಿ ಗ್ರಂಥಾಲಯಗಳ ನಿರ್ವಹಣೆ ಮಾಡಬೇಕು. ಗ್ರಂಥಾಲಯ ಮೇಲ್ವಿಚಾರಕರಿಗೆ ಗೌರವಧನವನ್ನು ಮಾಸಿಕವಾಗಿ ಪಾವತಿಸಬೇಕು. ಗ್ರಾಮ ಪಂಚಾಯತಿ ನೌಕರರಿಗೆ ಮಾಸಿಕವಾಗಿ ಕನಿಷ್ಠ ವೇತನ ಪಾವತಿಸಬೇಕು. ಗ್ರಾಮ ಪಂಚಾಯಿತಿಗಳು ಯಾವುದೇ ಹುದ್ದೆಗಳಿಗೆ ನೇಮಕಾತಿ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ . ಆಡಳಿತಾಧಿಕಾರಿಯು ಗ್ರಾಮ ಪಂಚಾಯತಿಗೆ ಯಾವುದೇ ನೌಕರರನ್ನು ನೇಮಕ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ರಾಜ್ಯದ ಬಹುತೇಕ ಗ್ರಾಮ ಪಂಚಾಯತಿಗಳ ವರ್ಷಗಳ ಅವಧಿಯು ಜೂನ್ 4 ರಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳುತ್ತದೆ. ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದಿರುವ ಕಾರಣ 5 ವರ್ಷಗಳ ಅವಧಿಯನ್ನು ಮುಗಿಸಿದ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಆದುದರಿಂದ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಅಧಿಕಾರ ಮತ್ತು ಕರ್ತವ್ಯಗಳ ಬಗ್ಗೆ ಈ ಕೆಳಕಂಡ ಮಾರ್ಗಸೂಚಿಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com