ಗಂಡು ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತ ಮಹಿಳೆ: ತಾಯಿ ಮಗು ಕ್ಷೇಮ

ಮೈಸೂರಿನಲ್ಲಿ ಕೊರೋನಾ ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.ಆರೋಗ್ಯ ಇಲಾಖೆ ಟ್ವಿಟ್ಟರ್ ನಲ್ಲಿ ಫೋಟೋ ಒಂದನ್ನು ಶೇರ್ ಮಾಡಿದೆ.
ಗಂಡು ಮಗುವಿನ ಚಿತ್ರ
ಗಂಡು ಮಗುವಿನ ಚಿತ್ರ

ಬೆಂಗಳೂರು: ಮೈಸೂರಿನಲ್ಲಿ ಕೊರೋನಾ ಸೋಂಕಿತ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.ಆರೋಗ್ಯ ಇಲಾಖೆ ಟ್ವಿಟ್ಟರ್ ನಲ್ಲಿ ಫೋಟೋ ಒಂದನ್ನು ಶೇರ್ ಮಾಡಿದೆ.

ಆರೋಗ್ಯ ಇಲಾಖೆಯ ವೈದ್ಯರು ಸಿ ಸೆಕ್ಷನ್ ಮೂಲಕ ಮಹಿಳೆಗೆ ಹೆರಿಗೆ ಮಾಡಿಸಿದ್ದು, ತಾಯಿ ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂಬ ಮಾಹಿತಿ ಹಂಚಿಕೊಂಡಿದೆ.

ಮೈಸೂರು ಡಿಹೆಚ್ಓ ವೆಂಕಟೇಶ್ ಈ ಕುರಿತು ಪ್ರತಿಕ್ರಿಯಿಸಿ, ಮಂಡ್ಯ ಮೂಲದ ಕೆ.ಆರ್ ಪೇಟೆಯಿಂದ ಹೆರಿಗೆಗೆ ಬಂದಿದ್ದ ಗರ್ಭಿಣಿಯಲ್ಲಿ ಕೊರೊನಾ ಸೋಂಕಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಪ್ರಸೂತಿ ತಜ್ಞರು ಹಾಗೂ ಸ್ತ್ರಿರೋಗ ತಜ್ಞರು ನಿಯೋಜಿತ ಕೋವಿಡ್ ಆಸ್ಪತ್ರೆಯಲ್ಲೇ ಸಿಜೇರಿಯನ್ ಮಾಡಿ ಹೆರಿಗೆ ಮಾಡಿಸಿದ್ದರು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com