'ಸಪ್ತಪದಿ' ಕಾರ್ಯಕ್ರಮದ ಮೂಹೂರ್ತ ಬದಲಿಸಿದ ಸರ್ಕಾರ

ಮುಜರಾಯಿ ಇಲಾಖೆಯ 'ಎ' ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ 'ಸಪ್ತಪದಿ' ಯೋಜನೆಗೆ ಕೊರೊನಾ ಸೂತಕ ತಂದಿದ್ದು, ಸರ್ಕಾರವಿವಾಹ ದಿನಾಂಕಗಳನ್ನು ಮುಂದೂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಜರಾಯಿ ಇಲಾಖೆಯ 'ಎ' ದರ್ಜೆ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ 'ಸಪ್ತಪದಿ' ಯೋಜನೆಗೆ ಕೊರೊನಾ ಸೂತಕ ತಂದಿದ್ದು, ಸರ್ಕಾರವಿವಾಹ ದಿನಾಂಕಗಳನ್ನು ಮುಂದೂಡಿದೆ.

ಮುಜರಾಯಿ ಇಲಾಖೆ ನಡೆಸುವ ಈ ಕಾರ್ಯಕ್ರಮಕ್ಕೆ ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಇರುವ ಬೇರೆ ಬೇರೆ ಶುಭ ಮುಹೂರ್ತದಲ್ಲಿ ಸಾಮೂಹಿಕ ವಿವಾಹ ನಡೆಸಲು ಸಮಯ ನಿಗದಿ ಮಾಡಿದೆ. ಕಳೆದ ಮಾಚ್‌ರ್‍ನಲ್ಲಿ ನೋಂದಾಯಿಸಿದ್ದ ವಧು-ವರರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅವರಿಂದ ಸಮ್ಮತಿ ಪತ್ರ ಪಡೆದು ನಿಗದಿತ ದಿನಾಂಕದಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ಕಳೆದ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ 110 ‘ಎ’ ದರ್ಜೆಯ ದೇವಾಲಯಗಳಲ್ಲಿ ನಡೆಸಲುದ್ದೇಶಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಕೋವಿಡ್‌ 19 ಹಿನ್ನೆಲೆಯಲ್ಲಿ ಮುಂದೂಡಿತ್ತು. ಸೋಂಕು ನಿಯಂತ್ರಣಕ್ಕೆ ಬರದೆ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಇದರ ನಡುವೆಯೇ ಸಾವಿರಾರು ಜೋಡಿಗಳ ‘ಸಪ್ತಪದಿ’ಗೆ ಜುಲೈ ಮತ್ತು ಆಗಸ್ಟ್‌ನಲ್ಲಿ ಸರ್ಕಾರ ಏಳು ದಿನಗಳ ಹೊಸ ಮುಹೂರ್ತ ನಿಗದಿ ಮಾಡಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com