ತಮಿಳುನಾಡು, ತೆಲಂಗಾಣದ ನಂತರ ಆಂಧ್ರ ಪ್ರದೇಶದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು

ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಭಯದಿಂದಾಗಿಯೇ ಕಳೆದ ಮಾರ್ಚ್‌‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಆಂಧ್ರಪ್ರದೇಶ: ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಭಯದಿಂದಾಗಿಯೇ ಕಳೆದ ಮಾರ್ಚ್‌‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಈಗ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದೆ.

ಈ ಸಂಬಂಧ ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, "ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ತಹಬಂದಿದೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೊರೋನಾಪ್ರಕರಣಗಳು ದಾಖಲಿಸಿದ್ದು, 96 ಜನ ಮೃತಪಟ್ಟಿದ್ದಾರೆ. 3,948 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 443 ಪ್ರಕರಣಗಳು ವರದಿಯಾಗಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com