ಆನ್ಲೈನ್ ತರಗತಿಗೆ ನಿಷೇಧ: ಪರ್ಯಾಯ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

ಆನ್‌ಲೈನ್ ತರಗತಿಗಳನ್ನು ನಿಷೇಧಿಸಿರುವುದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಸೂಚಿಸಿದೆ. 
ಆನ್ಲೈನ್ ತರಗತಿ
ಆನ್ಲೈನ್ ತರಗತಿ

ಬೆಂಗಳೂರು: ಆನ್‌ಲೈನ್ ತರಗತಿಗಳನ್ನು ನಿಷೇಧಿಸಿರುವುದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಸೂಚಿಸಿದೆ. 

ಕೋವಿಡ್-19ರ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿಗಳಿಗೆ ಸೀಮಿತ ಅವಧಿಗೆ ಆನ್ ಲೈನ್ ಶಿಕ್ಷಣಕ್ಕೆ ಅವಕಾಶ ನೀಡಬಹುದೇ ಎಂಬುದರ ಕುರಿತು ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

ಪ್ರಾಥಮಿಕ ಶಾಲೆಗಳಿಗೆ ಆನ್ ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಜೂನ್ 15 ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ನಿಗದಿತ ಅವಧಿಗೆ ಆನ್ ಲೈನ್ ಶಿಕ್ಷಣ ಒದಗಿಸಬಹುದೇ ಎಂದು ಪ್ರಶ್ನಿಸಿತು.

ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಹೇಗೆ ಅನ್ವಯವಾಗಲಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com