ಮಡಿಕೇರಿ: ಗುಂಡು ಹಾರಿಸಿಕೊಂಡು ನಿವೃತ್ತ ಎಎಸ್‍ಐ ಆತ್ಮಹತ್ಯೆ

ನಿವೃತ್ತಿ ಹೊಂದಿದ 24 ದಿನಗಳಲ್ಲೇ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‍ಐ) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರಪೇಟೆಯ ಮಾದೇಗೋಡುವಿನಲ್ಲಿ ನಡೆದಿದೆ.

Published: 23rd June 2020 04:09 PM  |   Last Updated: 23rd June 2020 04:09 PM   |  A+A-


for representation purpose only

ಸಂಗ್ರಹ ಚಿತ್ರ

Posted By : vishwanath
Source : UNI

ಮಡಿಕೇರಿ: ನಿವೃತ್ತಿ ಹೊಂದಿದ 24 ದಿನಗಳಲ್ಲೇ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್‍ಐ) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರಪೇಟೆಯ ಮಾದೇಗೋಡುವಿನಲ್ಲಿ ನಡೆದಿದೆ.

ಮಾದೇಗೋಡುವಿನ ಎಂ.ಎಸ್.ಈರಪ್ಪ(60) ಆತ್ಮಹತ್ಯೆ ಮಾಡಿಕೊಂಡವರು. ಈರಪ್ಪ ಕಳೆದ ಒಂದು ವರ್ಷದಿಂದ ಶನಿವಾರಸಂತೆ ಪೋಲಿಸ್ ಠಾಣೆಯಲ್ಲಿ ಎಎಸ್‍ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೇ 30 ರಂದು ನಿವೃತ್ತಿ ಹೊಂದಿದ್ದರು.

ಮನೆಯಲ್ಲೇ ಇಂದು ಬೆಳಗ್ಗೆ ಈರಪ್ಪ ತಮ್ಮ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಈರಪ್ಪ ಪತ್ನಿ, ಓರ್ವ ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಶನಿವಾರಸಂತೆ ಪೋಲಿಸರು ಬಂದು ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ.

Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp