ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ; ಪೊಲೀಸರಿಂದ ತೀವ್ರ ಪರಿಶೀಲನೆ

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಗೋಪಿನಾಥಂ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ

ಕೇಂದ್ರ ಆಂತರಿಕ ಪಡೆಯು ಮಾಹಿತಿ ನೀಡಿದ ಬಳಿಕ ಇದೀಗ ಈ ಅರಣ್ಯ ಪ್ರದೇಶದ ಸುತ್ತಲೂ ತೀವ್ರ ನಿಗಾವಹಿಸಲಾಗಿದ್ದು, ಪೊಲೀಸರು ಪರಿಶೀಲನೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

ಭಾರತದಲ್ಲಿ ನಿಷೇಧಗೊಂಡಿರುವ ಈ ಸ್ಯಾಟಲೈಟ್ ಫೋನ್'ನ್ನು ವಿದೇಶಿ ಪ್ರವಾಸಿಗರು ಬಳಸಿದ್ದಾರೆಯೇ, ನಕ್ಸಲರು ಅಥವಾ ಇತರೆ ಪಟ್ಟಭದ್ರ ಹಿತಾಸಕ್ತಿಗಳು ಬಳಸಿದ್ದಾರೆಂಯೇ ಎಂಬುದರ ಬಗ್ಗೆ ಅನುಮಾನಗಳು ಮೂಡತೊಡಗಿದ್ದು, ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ.ಆನಂದ್ ಕುಮಾರ್ ಅವರು, ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. 

ನಮಗೆ ದೊರತಿರುವ ಮಾಹಿತಿಗಳ ಅನ್ವಯ ಯಾರು ಸ್ಯಾಟಲೈಟ್ ಫೋನ್ ಬಳಕೆ ಮಾಡಿದ್ದಾರೆಂಬುದರ ಕುರಿತು ತನಿಖೆ ಆರಂಭಿಸಿದ್ದೇವೆ. ನಕ್ಸಲ್ ನಿಗ್ರಹ ಪಡೆ ಆ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಪೊಲೀಸರು ಕೂಡ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com