ಕೋವಿಡ್-19; ಮೃತ ಪೊಲೀಸರ​ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ: ಬಸವರಾಜ ಬೊಮ್ಮಾಯಿ

ಕೋವಿಡ್​-19ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್​-19ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಇತ್ತೀಚೆಗೆ ಪೊಲೀಸ್ ರಲ್ಲಿ ಕೊರೊನಾ ಸೋಂಕು ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ‌ ಈ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಪ್ರಮುಖ ಜವಾಬ್ದಾರಿ ಹೊಂದಿದ್ದು, ಕೋವಿಡ್ ಸಾವು, ಕಂಟೈನ್​ಮೆಂಟ್​ ಪ್ರದೇಶ ನಿಯಂತ್ರಣ ಮಾಡುವುದರ ಜೊತೆಗೆ ಜನರ ರಕ್ಷಣೆ ಮಾಡುವ ಹೊಣೆಯೂ ಅವರ ಮೇಲಿದೆ. ಆದ್ದರಿಂದ ನಮ್ಮ ಸಿಬ್ಬಂದಿಯಲ್ಲಿ ಅಧಿಕ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದರು.

ಬೆಂಗಳೂರಿನಲ್ಲಿ ಪೊಲೀಸರಿಗಾಗಿಯೇ ಪ್ರತ್ಯೇಕ ಚಿಕಿತ್ಸೆ ನೀಡಲು ಐದು ಕೋವಿಡ್-19 ಆಸ್ಪತ್ರೆ ಗುರುತಿಸಲಾಗಿದೆ. ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರಕಬೇಕು. ಅಲ್ಲದೇ, ತಪಾಸಣೆ ತಡವಾಗಬಾರದು ಎಂಬ ಉದ್ದೇಶದಿಂದ ಪೊಲೀಸರಿಗೆ ಹೆಚ್ಚು ತಪಾಸಣೆ ಸೆಂಟರ್ ಕೇಳಲಾಗಿದ್ದು, ಈ ಕುರಿತು ಎಸಿಎಸ್ ಅವರೊಂದಿಗೆ ಮಾತನಾಡಿದ್ದೇನೆ ಎಂದ ಅವರು ಪ್ರತ್ಯೇಕ ಆಸ್ಪತ್ರೆ, ಟೆಸ್ಟಿಂಗ್ ಘಟಕ ನೀಡಲಿದ್ದಾರೆ ಎಂದರು.

ಪೊಲೀಸರಿಗೆ ಐದು ಕೋವಿಡ್-19 ಆಸ್ಪತ್ರೆ
ಕೊರೋನಾ ವಾರಿಯರ್ ಸಿಲಿಕಾನ್ ಸಿಟಿ ಪೊಲೀಸರಲ್ಲಿ‌ ಇತ್ತೀಚೆಗೆ ಕೊರೋನಾ ಸೋಂಕು‌ ಹೆಚ್ಚಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕಾಯ್ದಿರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಕೊರೋನಾ ನಿಯಂತ್ರಣದ ಲಾಕ್‌ಡೌನ್ ಕಾರ್ಯಗಳನ್ನು ಪೊಲೀಸ್ ಇಲಾಖೆಯ ಸಿಬ್ಬಂದಿ, ಅಧಿಕಾರಿಗಳು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಈ ನಡುವೆ ಕರ್ತವ್ಯದಲ್ಲಿದ್ದ ಇಲಾಖೆಯ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಅವರ ಆರೋಗ್ಯದ ದೃಷ್ಟಿಯಿಂದ ಗೃಹ ಇಲಾಖೆ ವಿಶೇಷ ವ್ಯವಸ್ಥೆ ಕಲ್ಪಿಸುವಂತೆ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com