ಕರ್ನಾಟಕದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾಗೆ ಉಚಿತ ಚಿಕಿತ್ಸೆ ನೀಡಬೇಕು: ಸಿದ್ದರಾಮಯ್ಯ ಆಗ್ರಹ

ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರಗಳಲ್ಲಿ ದರ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರಗಳಲ್ಲಿ ದರ ನಿಗದಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಎಲ್ಲಾ ಆಸ್ಪತ್ರೆಗಳಲ್ಲೂ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಖಾಸಗಿ ಆಸ್ಪತ್ರೆಗಳಲ್ಲಿ ಕೊರನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲಾ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ, ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಕೊರೋನಾ ನಿಯಂತ್ರಿಸಲು ಸಂಪೂರ್ಣ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಘಳು ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ತಾವು ನಿರ್ವಹಿಸಬೇಕಾಗಿರುವ ಜವಾಬ್ದಾರಿಯನ್ನು ಖಾಸಗಿಯವರ ಹೆಗಲಿಗೆ ವರ್ಗಾಯಿಸಲು ಹೊರಟಿವೆ. ಈ ಮೂಲಕ ಬಡ-ಅಸಹಾಯಕ ಜನರನ್ನು ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬಲಿಪಶು ಮಾಡಲು ನಿರ್ಧರಿಸಿದೆ ಎಂದು ಕಿಡಿಕಾರಿದ್ದಾರೆ. 

ಕೊರೋನಾ ಸೋಂಕಿತನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಕಣ್ಣುಮುಚ್ಚಿ ಅನುಮೋದಿಸಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಂತಿದೆ. ಸಿಎಂ ಯಡಿಯೂರಪ್ಪ ನೆರವಾಗಲು ಹೊರಟಿರುವುದು ಸೋಂಕಿತರಿಗೋ? ಅಥವಾ ಖಾಸಗಿ ಆಸ್ಪತ್ರೆಗಳಿಗೋ ಎಂದು ಪ್ರಶ್ನಿಸಿದ್ದಾರೆ. 

ಅಲ್ಲದೆ, ಕೊರೋನಾ ರೋಗಿಗಳಿಗೆ ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಜೊತೆಗೆ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೋಕಾಲ್ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ. ಆಸ್ಪತ್ರೆಗಳಲ್ಲಿ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೋಕಾಲ್ ಜಾರಿಯಾಗುತ್ತಿರುವ ಬಗ್ಗೆ ನಿಗಾವಹಿಸಲು ಸಮಿತಿಯನ್ನೂ ರಚನೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com