ಬೆಂಗಳೂರು: ಸಚಿವಾಲಯ ಕಟ್ಟಡಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ

ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹ ಕಟ್ಟಡಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ಮಧ್ಯಾಹ್ನದವರೆಗೆ ನಿರ್ಬಂಧಿಸಲಾಗಿದೆ.
ವಿಧಾನ ಸೌಧ
ವಿಧಾನ ಸೌಧ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹ ಕಟ್ಟಡಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ಮಧ್ಯಾಹ್ನದವರೆಗೆ ನಿರ್ಬಂಧಿಸಲಾಗಿದೆ.

ಸಚಿವಾಲಯದ ಕಟ್ಟಡಗಳಲ್ಲಿ ನೋವೆಲ್ ಕೊರೋನಾ ವೈರಸ್( ಕೋವಿಡ್ 19 ) ಸೋಂಕು ಹರಡುತ್ತಿರುವುದರಿಂದ ಪ್ರತಿಯೊಂದು ಹಂತದಲ್ಲಿಯೂ ಸಹ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ. ಹೀಗಾಗಿ ಸಚಿವಾಲಯದ ಅಧಿಕಾರಿ ಸಿಬ್ಬಂದಿ ಸಾರ್ವಜನಿಕರ ಆರೋಗ್ಯ ಹಾಗೂ ಆಡಳಿತದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಚಿವರು ಅಧಿಕಾರಿಗಳನ್ನು ಭೇಟಿ ಮಾಡಲು ಸಂದರ್ಶಿಸಲು ನಿರ್ದಿಷ್ಟ ಉದ್ದೇಶವನ್ನು ಹೊಂದಿರುವ ಸಾರ್ವಜನಿಕರನ್ನು ಮಾತ್ರ ಪರಿಶೀಲಿಸಿ ಮಧ್ಯಾಹ್ನ 3.30 ರ ನಂತರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಯಾವುದೇ ಕಾರಣ್ಕಕೂ ಮಧ್ಯಾಹ್ನ 3.30ರ ಮೊದಲು ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಿದೆ. ಈ ಕುರಿತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com