ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್!

ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಪತಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿತ್ತು. ನಂತರ ಸಿಎಂ ಗೃಹ ಕಚೇರಿ ಕೃಷ್ಣಾವನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಆಗಿತ್ತು. ಆದರೆ ಅಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. 
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಪತಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿತ್ತು. ನಂತರ ಸಿಎಂ ಗೃಹ ಕಚೇರಿ ಕೃಷ್ಣಾವನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಆಗಿತ್ತು. ಆದರೆ ಅಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. 

ಸಿಎಂ ಯಡಿಯೂರಪ್ಪರ ಗೃಹ ಕಚೇರಿಯಲ್ಲಿ ಕೊರೋನಾ ವಕ್ಕರಿಸಿದ್ದರಿಂದ ಇಂದಿನ ಸಭೆಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ. 

ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾನ್ಸ್ ಟೇಬಲ್, ಎಆರ್ ಎಸ್ ಅಗ್ನಿಶಾಮಕ ಸಿಬ್ಬಂದಿ, ಎಲೆಕ್ಟ್ರಿಷಿಯನ್ ಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. 

ಕೊರೋನಾ ಸೋಂಕಿಗೆ ತುತ್ತಾಗಿರುವ ಸಿಬ್ಬಂದಿಗಳು ಪ್ರತಿ ದಿನ ಇಲ್ಲಿ ಕೆಲಸ ಮಾಡುತ್ತಿರಲ್ಲಿಲ್ಲ. ಮಹಿಳಾ ಪೊಲೀಸ್ ಸಿಬ್ಬಂದಿ 15 ದಿನಕ್ಕೊಮ್ಮೆ ಬದಲಾಗುತ್ತಾರೆ ಎಂದು ಆರೋಗ್ಯ ಸಚಿಲವಾಯ ಮಾಹಿತಿ ನೀಡಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com