ಕೋಲಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಮೊದಲ ಬಲಿ: 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದ್ದು, 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದ್ದು, 43 ವರ್ಷದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕೆಜಿಎಫ್‌ ತಾಲೂಕಿನ ತೂಕಲ್ಲು ಗ್ರಾಮದ ಸೋಂಕಿತೆ 8495, ಮಹಿಳೆ ಕೋವಿಡ್‌-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 43 ವರ್ಷ ಎಂದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ದೆಹಲಿಯಿಂದ ಗ್ರಾಮಕ್ಕೆ ಮದುವೆಗೆಂದು ಬಂದಿದ್ದ ಈ ಮಹಿಳೆಗೆ ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ.

ಕೋಲಾರದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೊಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 81 ಜನ ಸೋಂಕಿತರ ಪೈಕಿ, ಜಾಲಪ್ಪ ಆಸ್ಪತ್ರೆಯಲ್ಲಿಯೇ 14 ಜನ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com