ಕಲಬುರಗಿ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ
ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಹೊನಬಟ್ಟಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Published: 27th June 2020 01:38 PM | Last Updated: 27th June 2020 01:38 PM | A+A A-

ಸಾಂದರ್ಭಿಕ ಚಿತ್ರ
ಕಲಬುರಗಿ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಹೊನಬಟ್ಟಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಜೂ. 24 ರ ರಾತ್ರಿ ಪರೀಕ್ಷೆಗಾಗಿ ಮನೆ ಅಂಗಳದಲ್ಲಿ ತಡ ರಾತ್ರಿವರೆಗೂ ಓದುತ್ತಿದ್ದ ವಿದ್ಯಾರ್ಥಿನಿಯ ಬಾಯಿ ಮುಚ್ಚಿ ಪಕ್ಕದ ವಿವಾಹಿತ ವ್ಯಕ್ತಿ ನಿರ್ಜನ ಸ್ಥಳಕ್ಕೆಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಗಾಬರಿಕೊಂಡ ವಿದ್ಯಾರ್ಥಿನಿ ತಕ್ಷಣವೇ ಕಿರುಚಾಡಿದ್ದಾಳೆ.
ಬಾಲಕಿಯ ಧ್ವನಿ ಕೇಳುತ್ತಿದ್ದಂತೆ ನೆರೆಹೊರೆಯವರು ಬಂದು ರಕ್ಷಣೆ ಮಾಡಿದ್ದಾರೆ. ಲಾಕ್ ಡೌನ್ ನಿಂದಾಗಿ ಮುಂಬೈನಿಂದ ಗ್ರಾಮಕ್ಕೆ ವಾಪಸ್ಸಾಗಿದ್ದ ರಾಮ್ ಚವ್ಹಾಣ ಎಂಬ ವಿವಾಹಿತನಿಂದ ಈ ಹೀನ ಕೃತ್ಯ ನಡೆದಿದೆ ಎಂದು ಆರೋಪಿಸಿ ಜೂ. 24 ರ ರಾತ್ರಿಯೇ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಆರೋಪಿ ರಾಮ್ ಚವ್ಹಾಣ್ ನನ್ನು ಬಂಧಿಸಿದ್ದಾರೆ.
ಜೂ. 25 ರಂದು ಎಸ್ಎಸ್ಎಲ್ಸಿ ಮೊದಲ ಪರೀಕ್ಷೆಗೆ ವಿದ್ಯಾರ್ಥಿನಿ ಹಾಜರಾಗಿದ್ದು, ಇಂದು ಕೂಡ ಗಣಿತ ಪರೀಕ್ಷೆಗೆ ಹಾಜರಾಗಿದ್ದಾಳೆ. ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.