ಕೊರೋನಾ ಸೋಂಕು ಭೀತಿ ಹಿನ್ನೆಲೆ: ಬಿಎಂಟಿಸಿಯಲ್ಲಿ ಉಸ್ತುವಾರಿಗಳ ನೇಮಕ

ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಯೂ ಸಹ ಹಲವಾರು ಘಟಕಗಳಲ್ಲಿ ನಮ್ಮ ಸಿಬ್ಬಂದಿ ಸಹ ಕೊರೋನಾ ವೈರಸ್‌ಗೆ ತುತ್ತಾಗುತ್ತಿದ್ದಾರೆ.
ಬಿಎಂಟಿಸಿ ಬಸ್
ಬಿಎಂಟಿಸಿ ಬಸ್

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಯೂ ಸಹ ಹಲವಾರು ಘಟಕಗಳಲ್ಲಿ ನಮ್ಮ ಸಿಬ್ಬಂದಿ ಸಹ ಕೊರೋನಾ ವೈರಸ್‌ಗೆ ತುತ್ತಾಗುತ್ತಿದ್ದಾರೆ.

ಘಟಕಗಳಲ್ಲಿ, ಕಾರ್ಯಾಗಾರಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿಗೆ ಕೊರೋನಾ ವೈರಸ್‌ ಹರಡಿರುವ ಬಗ್ಗೆ ಮಾಹಿತಿ ಬಂದಲ್ಲಿ ಅಥವಾ ಲಕ್ಷ್ಮಣಗಳು ಕಂಡುಬಂದಲ್ಲಿ, ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ (7760991787) ಹಾಗೂ ಮುಖ್ಯ ವೈದ್ಯಾಧಿಕಾರಿ (7760991390) ದೂರವಾಣಿ ಮುಖಾಂತರ ಸಂಪರ್ಕಿಸಬೇಕು.

ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿಗಳು ಹಾಗೂ ಮುಖ್ಯ ವೈದ್ಯಾಧಿಕಾರಿಗಳು ಸಿಬ್ಬಂದಿಗೆ ಸೂಕ್ತ ನೆರವು ನೀಡಲಿದ್ದಾರೆ. ಈ ವಿಷಯವನ್ನು ಎಲ್ಲಾ ಘಟಕಗಳಲ್ಲಿ, ಕಾರ್ಯಾಗಾರಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಸೂಚನಾ ಫಲಕದಲ್ಲಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.

22 ಬಿಎಂಟಿಸಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಇನ್ನು ಬಿಎಂಟಿಸಿಯ ಸುಮಾರು 22 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.  ಇಬ್ಬರು ನಿರ್ವಾಹಕರು, ಮೂರು ಕಂಡಕ್ಟರ್ ಕಮ್ ಡ್ರೈವರ್, 7 ಚಾಲಕರಿಗೆ ಸೋಂಕು ತಗುಲಿದ್ದು ಶುಕ್ರವಾರ ಒಂದೇ ದಿನ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. ಐವರು ಸಿಬ್ಬಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 17 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಹೀಗಾಗಿ ಬಿಎಂಟಿಸಿ ಎಲ್ಲಾ ಸಿಬ್ಬಂದಿಗೂ ಸಾಮೂಹಿಕ ಕೊರೋನಾ ಪರೀಕ್ಷೆ  ನಡೆಸಲು ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com