ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ, ಶಾಸಕರಿಗೆ ಪರೀಕ್ಷಾ ಕೇಂದ್ರದಲ್ಲಿ ಫೋಟೋ ಕ್ಲಿಕ್ಕಿಸುವ ಚಿಂತೆ!

ಎಸ್ಎಸ್ಎಲ್'ಸಿ ಪರೀಕ್ಷೆಯ ಮೂರನೇ ವಿಷಯವಾದ ಗಣಿತ ಪರೀಕ್ಷೆ ಶನಿವಾರ ನಡೆದಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಒತ್ತಡದಲ್ಲಿದ್ದರೆ, ಮತ್ತೊಂದೆಡೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದ ಶಾಸಕರು ಫೋಟೋ ಕ್ಲಿಕ್ಕಿಸಿಕೊಳ್ಳುವುದರಲ್ಲಿ ಕಾರ್ಯಮಗ್ನರಾಗಿರುವುದು ಕಂಡು ಬಂದಿತ್ತು. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಎಸ್ಎಸ್ಎಲ್'ಸಿ ಪರೀಕ್ಷೆಯ ಮೂರನೇ ವಿಷಯವಾದ ಗಣಿತ ಪರೀಕ್ಷೆ ಶನಿವಾರ ನಡೆದಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಒತ್ತಡದಲ್ಲಿದ್ದರೆ, ಮತ್ತೊಂದೆಡೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದ ಶಾಸಕರು ಫೋಟೋ ಕ್ಲಿಕ್ಕಿಸಿಕೊಳ್ಳುವುದರಲ್ಲಿ ಕಾರ್ಯಮಗ್ನರಾಗಿರುವುದು ಕಂಡು ಬಂದಿತ್ತು. 

ರಾಜ್ಯದ ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿರುವ ಆಯಾ ಕ್ಷೇತ್ರದ ಶಾಸಕರು, ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಭೇಟಿ ವೇಳೆ ಪರೀಕ್ಷಾ ಕೊಠಡಿಗಳ ಬಳಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಾಸಕರಾದ ನಾವು ನಮ್ಮ ನಿಯಂತ್ರಣವೇನೆಂಬ ಪರಿಜ್ಞಾನವಿರಬೇಕು. ಎಲ್ಲಾ ರಾಜಕೀಯ ಗಣ್ಯರಿಗೆ ಸಂದೇಶ ರವಾನಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಹಾಸನ ಜಿಲ್ಲೆಯ ಅರಕಲಗೂಡ ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಶಾಲೆಯಲ್ಲಿ 16 ವಿದ್ಯಾರ್ಥಿಯೊಬ್ಬರಲ್ಲಿ ವೈರಸ್ ಪತ್ತೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ. 

ಈ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಯಲ್ಲಿ ಲಕ್ಷಣಗಳು ಕಂಡು ಬಂದಿರಲಿಲ್ಲ. ಆರಂಭದಲ್ಲಿ ವಿದ್ಯಾರ್ಥಿಗೆ ಡೆಂಗ್ಯೂ ಇರುವುದು ಕಂಡು ಬಂದಿದ್ದು, ಬಳಿಕ ಕೊರೋನಾ ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆ ಅಂತ್ಯದ ಸಮಯದಲ್ಲಿ ವೈದ್ಯಕೀಯ ವರದಿ ಬಂದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಗಿತ್ತು ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com