ಸೋಂಕಿತ ವಿದ್ಯಾರ್ಥಿಯೊಂದಿಗೆ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳಿಗೆ ಕೊರೋನಾ ನೆಗೆಟಿವ್

ಕೊರೋನಾ ಸೋಂಕಿತ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳ ವರದಿ ಬಂದಿದ್ದು, ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ, ಹೀಗಾಗಿ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೋನಾ ಸೋಂಕಿತ ವಿದ್ಯಾರ್ಥಿಯೊಂದಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದ 17 ವಿದ್ಯಾರ್ಥಿಗಳ ವರದಿ ಬಂದಿದ್ದು, ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ, ಹೀಗಾಗಿ ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ  ಸೊಂಕಿತ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದ.  ಡೆಂಗ್ಯೂನಿಂದ ಬಳಲುತ್ತಿದ್ದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ಬಂದಿತ್ತು, ಆತನನ್ನು ಹಾಸನದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸ್ಪತ್ರೆಯ ಕೊರೋನಾ ಅಪಾಯ ಮೌಲ್ಯ ಮಾಪನ ಸಮಿತಿಯು ಕೊರೋನಾ ಪರೀಕ್ಷೆ ನಡೆಸಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆ ಸಿಬ್ಬಂದಿಗೆ ಕೊರೋನಾ ನೆಗೆಟಿವ್ ಬಂದಿದೆ.

ಅಂತಿಮವಾಗಿ ಎಲ್ಲಾ 17 ವಿದ್ಯಾರ್ಥಿಗಳಿಗೆ ಸೋಮವಾರ ಪರೀಕ್ಷೆ ಬರೆಯಲು ಅವಕಾಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸ್ವ್ಯಾಬ್ ಪರೀಕ್ಷಾ ವರದಿಗಾಗಿ ಆತಂಕದಿಂದ ಕಾಯುತ್ತಿದ್ದ ಶಿಕ್ಷಣ ಸಿಬ್ಬಂದಿ ಮತ್ತು ಪೋಷಕರು ಈಗ ನಿರಾಳರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com