ರಾಜ್ಯದಲ್ಲಿ ಶೇ.57 ರಷ್ಟು ಸೋಂಕಿತರು ಗುಣಮುಖ: ಡಾ. ಕೆ.ಸುಧಾಕರ್ 

ರಾಜ್ಯದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. 
ಸುಧಾಕರ್
ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇಕಡ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 7,507 ಮಂದಿ ಸೋಂಕಿತರು ಗುಣಮುಖರಾಗಿದ್ದು, 5,472 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇಕಡ 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡುಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇಕಡ 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ತಮ್ಮ ಕುಟುಂಬದಲ್ಲಿ ಕೊರೊನಾ ಸೋಂಕು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬದ ಎಲ್ಲಾ ಸದಸ್ಯರು ಮತ್ತು ಸಿಬ್ಬಂದಿ ಕೋವಿಡ್-೧೯ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದೇವೆ. ಸಚಿವನಾಗಿ ಅದಕ್ಕೂ ಮಿಗಿಲಾಗಿ ವೈದ್ಯನಾಗಿ ಸರ್ಕಾರದ ಎಲ್ಲಾ ಮಾರ್ಗಸೂಚನೆಗಳನ್ನು ಪಾಲನೆ ಮಾಡಿದ್ದೇವೆ. ಸೋಂಕು ನಿಯಂತ್ರಣಕ್ಕೆ ಪ್ರತಿಯೊಬ್ಬರು ಸರ್ಕಾರದ ಸೂಚನೆಗಳನ್ನು ಪಾಲಿಸಬೇಕೆಂದು ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಈ ಮಧ್ಯೆ ಬೆಂಗಳೂರು ನಗರದಲ್ಲಿ ಕಳೆದ ೫ ದಿನಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಜೂನ್ ೨೩ರಂದು 1,556 ಪ್ರಕರಣಗಳನ್ನು ಹೊಂದಿದ್ದ ನಗರದಲ್ಲಿ ಇದೀಗ ಸೋಂಕಿತರ ಸಂಖ್ಯೆ 3,416ಗೆ ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ ಬೆಂಗಳೂರು ನಗರದ ಪಾಲು ಶೇಕಡ 25.62 ರಷ್ಟಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ವ್ಯಾಪಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com