ಸೈಕಲ್ ಜಾಥಾ, ಕೈ ನಾಯಕರ ವಿರುದ್ದ ಪ್ರಕರಣ ದಾಖಲಿಸುತ್ತೇವೆ: ಡಿಸಿಪಿ ರಾಥೋಡ್

ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತು. ಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ. ಜಾಥ ಮಾಡದಂತೆ ಕಾಂಗ್ರೆಸ್ ಗೆ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.

Published: 29th June 2020 03:34 PM  |   Last Updated: 29th June 2020 03:34 PM   |  A+A-


congress leader

ಕಾಂಗ್ರೆಸ್ ಮುಖಂಡರು

Posted By : Vishwanath S
Source : UNI

ಬೆಂಗಳೂರು: ನಗರದಲ್ಲಿ ಸೈಕಲ್ ಜಾಥ ನಡೆಸಲು ಕಾಂಗ್ರೆಸ್ ಕಾರ್ಯದರ್ಶಿಯಿಂದ ಮನವಿ ಬಂದಿತ್ತು. ಈ ಸಮಯದಲ್ಲಿ ಜಾಥ ಮಾಡಲು ಅನುಮತಿ ನೀಡಿರಲಿಲ್ಲ. ಜಾಥ ಮಾಡದಂತೆ ಕಾಂಗ್ರೆಸ್ ಗೆ ನೋಟಿಸ್ ಕೂಡ ನೀಡಲಾಗಿತ್ತು ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದ್ದಾರೆ.

ಆದರೂ ಕಾಂಗ್ರೆಸ್ ನಾಯಕರೂ ಕಾನೂನು ಉಲ್ಲಂಘನೆ ಮಾಡಿ ಸೈಕಲ್ ಜಾಥ ನಡೆಸಿದ್ದಾರೆ. ಈ ಸಂಬಂದ ಕಾನೂನು ತಜ್ಞರ ಜೊತೆ ಚರ್ಚಿಸಿ  ಪ್ರಕರಣ ದಾಖಲು ಮಾಡುವುದಾಗಿಯೂ ಎನ್ಡಿಎಂಎ ಕಾಯಿದೆ ಅಡಿ ದೂರು ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಸಿಲಿಕಾನ್ ಸಿಟಿ ಪೊಲೀಸರ ಅನುಮತಿ ಇಲ್ಲದೆಯೂ ಸೋಮವಾರ ಕಾಂಗ್ರೆಸ್ ನಾಯಕರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ಎಫ್​ಐಆರ್​ ದಾಖಲಿಸುವುದು ಖಚಿತ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೆಟ್ರೋಲ್​ ಡೀಸಲ್ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್​ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಹೀಗಿದ್ದರೂ ಪ್ರತಿಭಟನೆ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಎಫ್‌ಐಆರ್ ದಾಖಲಾಗುವುದು ಖಚಿತ ಎಂದು ತಿಳಿಸಿದ್ದಾರೆ.

ಮಧ್ಯಾಹ್ನದ ಬಳಿಕ‌ ಎಫ್‌ಐಆರ್‌ನಲ್ಲಿ ಯಾವ ಯಾವ ನಾಯಕರ ಹೆಸರು ಇರಲಿದೆ ಎಂಬುದು ತಿಳಿಯಲಿದೆ ಎಂದು ಹೇಳಿದರು‌. ನಗರ ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್​​ ಪ್ರತಿಕ್ರಿಯಿಸಿ, ಪ್ರತಿಭಟನೆ ಕೈಗೆತ್ತಿಕೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಹೈಗ್ರೌಂಡ್ಸ್ ಪೋಲಿಸರು ತಿಳಿಸಿದ್ದರೂ, ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp