ರಾಜ್ಯದಲ್ಲಿ ಇಂದು ಕೊರೋನಾಗೆ 20 ಬಲಿ, ಬೆಂಗಳೂರಿನಲ್ಲಿ 503 ಸೇರಿ 947 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 20 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 246ಕ್ಕೇರಿಕೆಯಾಗಿದೆ.

Published: 30th June 2020 07:48 PM  |   Last Updated: 30th June 2020 08:57 PM   |  A+A-


Markaz attendee who caught COVID-19 ends life

ಸಾಂದರ್ಭಿಕ ಚಿತ್ರ

Posted By : Lingaraj Badiger
Source : UNI

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 20 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 246ಕ್ಕೇರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ನಾಲ್ವರು ಸೇರಿದಂತೆ ಒಟ್ಟು 20 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಎಂಬಂತೆ 95 ಜನ ಮೃತಪಟ್ಟಿದ್ದರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರಿನಲ್ಲಿ 503 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 947 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದ್ದು, ಮಂಗಳವಾರ 235 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಚೇತರಿಕೆ ಕಂಡವರ ಸಂಖ್ಯೆ 7918ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7074 ಸಕ್ರಿಯ ಪ್ರಕರಣಗಳಿದ್ದು, 271 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 503, ಬಳ್ಳಾರಿಯಲ್ಲಿ 61, ಹಾವೇರಿಯಲ್ಲಿ 49, ದಕ್ಷಿಣ ಕನ್ನಡದಲ್ಲಿ 44, ಉತ್ತರಕನ್ನಡದಲ್ಲಿ 40, ವಿಜಯಪುರದಲ್ಲಿ 39, ಶಿವಮೊಗ್ಗದಲ್ಲಿ 22, ಬೆಂಗಳೂರು ಗ್ರಾಮಾಂತರದಲ್ಲಿ 21, ಬೀದರ್‌,ಧಾರವಾಡದಲ್ಲಿ ತಲಾ17, ಹಾಸನದಲ್ಲಿ 16, ರಾಯಚೂರು, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರದಲ್ಲಿ ತಲಾ 12, ಚಿಕ್ಕಮಗಳೂರಿನಲ್ಲಿ 10, ಉಡುಪಿ, ಮೈಸೂರಿನಲ್ಲಿ ತಲಾ 9, ಬಾಗಲಕೋಟೆ, ಕೊಡಗಿನಲ್ಲಿ ತಲಾ 4, ಕೋಲಾರ, ಚಿತ್ರದುರ್ಗದಲ್ಲಿ ತಲಾ 3, ಯಾದಗಿರಿ, ಮಂಡ್ಯ, ಬೆಳಗಾವಿ, ಗದಗದಲ್ಲಿ ತಲಾ 2, ತುಮಕೂರಿನಲ್ಲಿ 1 ಪ್ರಕರಣಗಳು ವರದಿಯಾಗಿವೆ. 

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp