ಬಳ್ಳಾರಿಯಲ್ಲಿ ಅಮಾನವೀಯ ಶವಸಂಸ್ಕಾರ: ತನಿಖೆಗೆ ಜಿಲ್ಲಾಧಿಕಾರಿ ಆದೇಶ

ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಶವಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.
ಕೊರೋನಾ ಸೋಂಕಿತರ ಶವಗಳ ವಿಲೇವಾರಿ
ಕೊರೋನಾ ಸೋಂಕಿತರ ಶವಗಳ ವಿಲೇವಾರಿ

ಬಳ್ಳಾರಿ: ಬಳ್ಳಾರಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಶವಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದ್ದಾರೆ.

ಕಳೆದ ಸೋಮವಾರ ಜಿಲ್ಲೆಯಲ್ಲಿ ಕೊರೋನಾ ವೈರಸ್ ನಿಂದಾಗಿ ಎಂಟು ಜನರು‌ ಮೃತಪಟ್ಟಿದ್ದರು. ಹೆಚ್ಚು ಜನರು ಸಾವನ್ನಪ್ಪಿದ್ದರಿಂದ ಒಂದೇ ಜಾಗದಲ್ಲಿ ಶವ ಸಂಸ್ಕಾರ ನಡೆಸಲು ಆರೋಗ್ಯ ಇಲಾಖೆ ಸೂಚಿಸಿತ್ತು.

ಬಳ್ಳಾರಿಯ ಹೊರವಲಯದಲ್ಲಿ ಶವ ಸಂಸ್ಕಾರ ಮಾಡಲು ಜಾಗ ನಿಗದಿ ಮಾಡಲಾಗಿತ್ತಾದರೂ ಅಮಾನವೀಯವಾಗಿ ಒಂದೇ ಗುಂಡಿಗೆ ಹೆಣಗಳನ್ನು ಬಿಸಾಡಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದಲ್ಲದೇ ಮಾಧ್ಯಮಗಳಲ್ಲಿ ಸುದ್ದಿಬಿತ್ತಾರವಾದ ನಂತರ ಜನರಿಂದ ಆಕ್ರೋಶವೂ ವ್ಯಕ್ತವಾಗಿತ್ತು.

ಇಂದು ಕೂಡ ಐದು ಜನರು ಸಾವನ್ನಪ್ಪಿದ್ದು, ಕೋವಿಡ್‌ನಿಂದ ಜಿಲೆಯಲ್ಲಿ ಮೃತಪಟ್ಟವರ ಸಂಖ್ಯೆ 28 ಕ್ಕೇರಿದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com