ಕೊರೋನಾ ಸೋಂಕಿತನಿಂದ ಆತ್ಮಹತ್ಯೆ ಯತ್ನ: ಪೊಲೀಸರ ಮನವೊಲಿಕೆ ಬಳಿಕ ಆಸ್ಪತ್ರೆಗೆ ದಾಖಲು

ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

Published: 30th June 2020 12:17 PM  |   Last Updated: 30th June 2020 12:17 PM   |  A+A-


suicide

ಆತ್ಮಹತ್ಯೆ

Posted By : Srinivasamurthy VN
Source : UNI

ಮಂಗಳೂರು: ಕೋವಿಡ್‌-19 ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.

ಉತ್ತರಾಖಂಡ್ ರಾಜ್ಯದ ಕೂಲಿಕಾರ್ಮಿಕನೋರ್ವ ನಗರದ ಹಂಪನಕಟ್ಟೆಯ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಹಲವು ದಿನಗಳಿಂದ ಕೆಲಸ ಮಾಡುತ್ತಿದ್ದ. ಈತನಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ಗಂಟಲು ದ್ರವ ಮಾದರಿ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು.

ವಿಷಯ ತಿಳಿದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತನನ್ನು ಕರೆದೊಯ್ಯಲು ಆಗಮಿಸಿದ್ದರು. ಸೋಂಕಿತನನ್ನು ಆ್ಯಂಬುಲೆನ್ಸ್‌ಗೆ ಹತ್ತಿಸುವ ಸಂದರ್ಭದಲ್ಲಿ ಈತ ತಪ್ಪಿಸಿಕೊಂಡಿದ್ದಾನೆ. ಬಳಿಕ ಸೋಂಕಿತನು ನಗರದ ಟವರ್ ಕ್ಲಾಕ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಈ ವೇಳೆ ಬಂದರ್ ಪೊಲೀಸರು ಆತನನ್ನು ಮನವೊಲಿಸಿ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp