ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರು; ನಿಗಾ ಇಡಲು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು: ಸಿದ್ದು

ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ
ಬಿಎಸ್ ಯಡಿಯೂರಪ್ಪ ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ 
ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ವಿವಿಧ ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಕೊರೋನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ,ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿಯಾಗಿದೆ ಅವರ ಕಡೆ ಗಮನಹರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ.ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಮುಖ್ಯಮಂತ್ರಿ ಅವರೇ ಇದು ಅನ್ಯಾಯ ಅಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com