ಎಸ್ಎಸ್ಎಲ್'ಸಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿಗೆ ಕೊರೋನಾ: ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ ಆತಂಕದಲ್ಲಿ 50 ಮಂದಿ

ಜಿಲ್ಲೆಯಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಕೇಂದ್ರವೊಂದರ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದೀಗ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸೇರಿ 50 ಮಂದಿಗೆ ಆತಂಕ ಶುರುವಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ಕೇಂದ್ರವೊಂದರ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇದೀಗ ವಿದ್ಯಾರ್ಥಿಗಳು, ಸಿಬ್ಬಂದಿಗಳು ಸೇರಿ 50 ಮಂದಿಗೆ ಆತಂಕ ಶುರುವಾಗಿದೆ. 

ಜೂ.25-27ರಂದು ಬಾಗಲಕೋಟೆಯ ನವನಗರದ ಎಸ್ಎಸ್ಎಲ್'ಸಿ ಬಾಹ್ಯ ಪರೀಕ್ಷೆ  ಕೇಂದ್ರದ ಮೇಲ್ವಿಚಾರಕಿಯಾಗಿ ಕೆಲಸ ಮಾಡಿದ್ದರು. ಅವರಿಗೆ ತಲೆನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಪಾಸಿಟಿವ್ ಕಂಡು ಬಂದಿದೆ. 

ಇದರಿಂದ ಪರೀಕ್ಷೆ ಕೇಂದ್ರದ ಸಿಬ್ಬಂದಿಯಲ್ಲಿ ತೀವ್ರ ಆತಂಕ ಉಂಟಾಗಿದೆ. ಪರೀಕ್ಷೆ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ 20 ಸಿಬ್ಬಂದಿಯನ್ನು ಕ್ವಾರಂಟೈನ್'ಗೆ ಸೇರಿಸಲಾಗಿದೆ. ಜೂ.29ರಂದು ನಡೆಯಲಿರುವ ಪರೀಕ್ಷೆಗೆ ಬದಲಿ 20 ಮಂದಿ ಸಿಬ್ಬಂದಿಯನ್ನು ನೇಮಿಸಲಾಗಿದೆ. 

ಬಾಗಲಕೋಟೆ ಜಿಲ್ಲೆಯ ಪ್ರೌಢಶಾಲೆಯಿಂದ 40 ವರ್ಷದ ಶಿಕ್ಷಕಿ ಶಾಲೆಗೆ ಬಸ್ ಪ್ರಯಾಣ ಮೂಲಕ ಹೋಗಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತಪಡಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com