ಮನೆ ಗೋಡೆ ಮೇಲೆ ಪಾಕ್ ಪರ, ಪ್ರಧಾನಿ ವಿರುದ್ಧ ಬರಹ: ಪ್ರತಿಭಟನೆ

ಕಲಬುರಗಿಯಲ್ಲಿ ಮನೆ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಬರೆದ  ಹಿನ್ನೆಲೆಯಲ್ಲಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ
ಮನೆ ಮುಂದೆ ಪ್ರತಿಭಟನೆಯ ಚಿತ್ರ
ಮನೆ ಮುಂದೆ ಪ್ರತಿಭಟನೆಯ ಚಿತ್ರ

ಕಲಬುರಗಿ: ಕಲಬುರಗಿಯಲ್ಲಿ ಮನೆ ಗೋಡೆಯ ಮೇಲೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಬರೆದ  ಹಿನ್ನೆಲೆಯಲ್ಲಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ

ಕೃತ್ಯ ಎಸಗಿದ ದೇಶದ್ರೋಹಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಚೌಕ್ ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು  ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದರು.

ಪಾಕ್ ಪ್ರೇಮ ಪ್ರದರ್ಶನ ಮಾಡುತ್ತಿರುವವರನ್ನು ಗಲ್ಲಿಗೇರಿಸಿ. ಕಿಡಿಗೇಡಿಗಳು ಯಾರೇ ಆಗಿರಲಿ ಅವರನ್ನು ಪತ್ತೆ ಹಚ್ಚಿ ಕೂಡಲೇ ಬಂಧಿಸಬೇಕು. ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com