30 ತಿಂಗಳ ಮಗುವನ್ನು ಹತ್ಯೆ ಮಾಡಿದ್ದ ಚಿರತೆಗೆ ಗುಂಡಿಕ್ಕಿ ಕೊಲ್ಲಿ: ಸಚಿವರ ಆದೇಶ

ಮನೆಯ ಮುಂದೆ ಆಟವಾಡುತ್ತಿದ್ದ 30 ತಿಂಗಳ ಮಗುವನ್ನು ಹತ್ಯೆ ಮಾಡಿದ ಚಿರತೆಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ 30 ತಿಂಗಳ ಮಗುವನ್ನು ಹತ್ಯೆ ಮಾಡಿದ ಚಿರತೆಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಬಿಚೇನಹಳ್ಳಿಗೆ ಭೇಟಿ ನೀಡಿ ಮಗುವಿನ ಪೋಷಕರೊಂದಿಗೆ ಸಮಾಧಾನ ಮಾಡಿದರು. ಜೊತೆಗೆ, ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನಂತರ, ಸುದ್ದಿಗಾರರೊಂದಿಗೆ ಮಾತನಾಡಿ ಸೋಮವಾರದಿಂದ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಆರಂಭವಾಗಲಿದೆ ಎಂದರು. ಚಿರತೆದಾಳಿಗೊಳಗಾಗಿ ಮೃತಪಟ್ಟ 3 ವರ್ಷದ ಮಗು ಚಂದನಾ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಕೊಡಿಸುವುದಾಗಿ ಘೋಷಣೆ ಮಾಡಿದ್ದಾರೆ.

ಮಗು ಕಳೆದುಕೊಂಡಿರುವ ಪೋಷಕರ ನೋವು ನನಗೆ ಅರ್ಥವಾಗುತ್ತದೆ. ಆದರೆ, ಮತ್ತೆ ಮಗುವನ್ನು ತಂಡು ಕೊಡುವ ಶಕ್ತಿ ನಮಗ್ಯಾರಿಗೂ ಇಲ್ಲ. ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ರೂ.10 ಲಕ್ಷ ಪರಿಹಾರ ಕೊಡಿಸುವುದಾಗಿ ತಿಳಿಸಿದರು. ಜೊತೆಗೆ ಮಗು ಕಳೆದುಕೊಂಡಿರುವ ದಂಪತಿಗೆ 5 ವರ್ಷ ಅರಣ್ಯ ಇಲಾಖೆ ವತಿಯಿಂದ ರೂ.2 ಸಾವಿರ ಮಾಸಾಶನ ನೀಡಲು ಆದೇಶಿಸಿದರು. 

ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲೂಕಿನ ಜನರನ್ನು ಬೆಚ್ಚಿ ಬೀಳಿಸಿ ನಾಲ್ವರನ್ನು ಬಲಿ ತೆಗೆದುಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವಂತೆ  ಸಾರ್ವಜನಿಕರು ನಿರಂತರ ಒತ್ತಾಯಿಸಿದ್ದರೂ ಮೀನ ಮೇಷ ಎಣಿಸುತ್ತಿದ್ದ ಸರ್ಕಾರ ಮಗುವಿನ ಸಾವಿನ ಬಳಿಕ ಎಚ್ಚೆತ್ತುಕೊಂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com