ಕೊರೋನಾ ವೈರಸ್: ಶಾಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ

ಕೇಂದ್ರ ಮತ್ತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು(ಕೋವಿದ್ -19) ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ‌ ಅರಿವು ಮೂಡಿಸಲು ರಾಜ್ಯದ ಶಾಲಾ- ಕಾಲೇಜುಗಳು ಕೆಲವು ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು(ಕೋವಿದ್ -19) ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ‌ ಅರಿವು ಮೂಡಿಸಲು ರಾಜ್ಯದ ಶಾಲಾ- ಕಾಲೇಜುಗಳು ಕೆಲವು ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶಿಸಿದೆ.

ಈಗಾಗಲೇ ಚೀನಾದ ಉಹಾನ್ ನಗರ ಪ್ರದೇಶದಲ್ಲಿ ಕೋವಿದ್ ಹರಡಿದ್ದು, ಇತರ ರಾಷ್ಟ್ರಗಳಲ್ಲಿಯೂ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಸಾರ್ವಜನಿಕ ಶಿಕ್ಷಣ ಇಲಾಖೆಯು ಕೋವಿದ್ 19 ಸೋಂಕು ಹರಡದಂತೆ ಹಾಗೂ ಅದನ್ನು ತಡೆಗಟ್ಟಲು ಶಾಲೆಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಮಕ್ಕಳು ವೈರಾಣು ಸೋಂಕಿಗೆ ಅತೀ ಶೀಘ್ರವಾಗಿ ತುತ್ತಾಗುತ್ತಾರೆ. ಇಂತಹ ವೈರಾಣುಗಳಿಂದ ಹರಡುವ ರೋಗಗಳ ಕುರಿತು ಹಾಗೂ ಅವುಗಳಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಕೊರೋನ ವೈರಸ್ ಸೋಂಕು ರಾಜ್ಯದಲ್ಲಿ ಹರಡದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಯಾವುದೇ ವಿದ್ಯಾರ್ಥಿ, ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿ ಜ್ವರ, ಶೀತ ಅಥವಾ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದರೆ ಅಂತಹವರು ಶಾಲೆಗೆ ಕಡ್ಡಾಯವಾಗಿ ಹಾಜರಾಗಬಾರದು. ಆರೋಗ್ಯದಲ್ಲಿಸುಧಾರಣೆಯಾಗಿರುವ ಬಗ್ಗೆ ವೈದ್ಯರಿಂದ ಖಚಿತಪಡಿಸಿಕೊಂಡು ಶಾಲೆಗೆ ಹಿಂದಿರುಗಬೇಕು. ಇಂತಹ ವ್ಯಕ್ತಿಗಳು ಜನನಿಬಿಡ ಪ್ರದೇಶಗಳಿಗೆ ಹೋಗದೆ ಮನೆಯಲ್ಲೇ ಪ್ರತ್ಯೇಕವಾಗಿರಬೇಕು.

ಕೊರೊನಾ ವೈರಸ್‌ಪೀಡಿತ ಪ್ರದೇಶಗಳಿಗೆ ವಿದ್ಯಾರ್ಥಿಗಳನ್ನು ಪಿಕ್ನಿಕ್‌, ಶೈಕ್ಷಣಿಕ ಪ್ರವಾಸಕ್ಕೆ ಕರೆದುಕೊಂಡು ಹೋಗಬಾರದು. ಕೊರೊನಾ ವೈರಸ್‌ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತೆಯೂ ಆದೇಶಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com