ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ: ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಅನಿವಾರ್ಯತೆಯಲ್ಲಿ ಸಿಎಂ ಯಡಿಯೂರಪ್ಪ 

ಇದೇ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆರ್ಥಿಕ ಕುಸಿತವನ್ನು ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರದ ಮೊರೆ ಹೋಗುವುದು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ.
ಸಿಎಂ ಬಿ ಎಸ್ ಯಡಿಯೂರಪ್ಪ
ಸಿಎಂ ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಇದೇ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಆರ್ಥಿಕ ಕುಸಿತವನ್ನು ಎದುರಿಸುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರದ ಮೊರೆ ಹೋಗುವುದು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ. ಹೀಗಾಗಿ ಬಜೆಟ್ ಅವಶ್ಯಕತೆಗಳನ್ನು ನಿರ್ವಹಿಸಲು ಅಬಕಾರಿ, ಮನರಂಜನೆ ಮತ್ತು ಪೆಟ್ರೋಲಿಯಂ ಉತ್ಪನ್ನ ತೆರಿಗೆಗಳನ್ನು ಹೆಚ್ಚಿಸುವ ಅನಿವಾರ್ಯತೆ ಸಿಎಂ ಅವರಿಗೆ ಎದುರಾಗಿದೆ.


ಈ ಬಾರಿಯ ಬಜೆಟ್ ಗಾತ್ರ ಸರಿಸುಮಾರು ಕಳೆದ ವರ್ಷದಷ್ಟೇ ಇರುತ್ತದೆ ಎಂದು ಹೇಳಲಾಗುತ್ತಿದೆ.ಕರ್ನಾಟಕದಲ್ಲಿ ಆರ್ಥಿಕ ಕುಸಿತಕ್ಕೆ ಮುಖ್ಯ ಕಾರಣ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮ ವಲಯಗಳಲ್ಲಿ ಕಾರ್ಯಕ್ಷಮತೆ ನೀರಸವಾಗಿರುವುದು ಎಂದು ಹೇಳಲಾಗುತ್ತಿದೆ.


ರಾಜ್ಯ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ರಾಜ್ಯದ ಸಾಲ ಪಡೆಯುವ ಮಿತಿಯೊಳಗೆ ಮಾರುಕಟ್ಟೆಯಿಂದ ಹಣವನ್ನು ಒಟ್ಟುಗೂಡಿಸುವುದು ಸರಿಯಾಗಿದೆ. ಅವಶ್ಯಕತೆಯ ಆಧಾರದ ಮೇಲೆ ಇದನ್ನು ಮಾಡಲಾಗುತ್ತಿದ್ದು, ಭವಿಷ್ಯದಲ್ಲಿ ರಾಜ್ಯವು ಈ ಆಯ್ಕೆಯನ್ನು ಹೆಚ್ಚು ಅನ್ವೇಷಿಸಬಹುದು. ಇವೆಲ್ಲವೂ ಅವಶ್ಯಕತೆಗಳನ್ನು ಆಧರಿಸಿಕೊಂಡಿದೆ ಎನ್ನುತ್ತಾರೆ. 


ಹಣದ ಕ್ರೋಢೀಕರಣಕ್ಕೆ ಷೇರುಗಳನ್ನು ಹರಾಜು ಮೂಲಕ ಮಾರಾಟ ಮಾಡುವುದು ಕೂಡ ಒಂದು ಆಯ್ಕೆಯಾಗಿದೆ. ಇದನ್ನು ಕರ್ನಾಟಕ ಹಾಗೂ ಬೇರೆ ರಾಜ್ಯಗಳಾದ ಆಂಧ್ರ ಪ್ರದೇಶ, ಅಸ್ಸಾಂ, ಗುಜರಾತ್, ಕೇರಳ ಮತ್ತು ತಮಿಳು ನಾಡುಗಳು ಪಾಲಿಸಿಕೊಂಡು ಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com