ಕೊರೊನಾ ವೈರಸ್ ಬಗ್ಗೆ ಆತಂಕ ಬೇಡ, ಮುಂಜಾಗ್ರತೆ ವಹಿಸಿ - ಬಿ ಎಸ್ ಯಡಿಯೂರಪ್ಪ

ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು. ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮಗಳಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು. ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮಗಳಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಅವರು, ವೈರಸ್ ಕುರಿತ ಊಹಾಪೋಹಾಗಳಿಂದ ಜನತೆ ಭಯಭೀತರಾಗಬಾರದು. ಸರ್ಕಾರ ಎಲ್ಲಾ ರೀತಿಯಿಂದಲೂ ವೈರಸ್ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಜನತೆಗೆ ಅಭಯ ನೀಡಿದ್ದಾರೆ.


ಆರೋಗ್ಯ ಸಚಿವ ಬಿ. ಶ್ರೀರಾಮುಲು ತನ್ನ ಟ್ವೀಟ್‌ನಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಯ ಬೆಂಗಳೂರಿನ ನಿವಾಸ ಹಾಗೂ ಕಚೇರಿಯನ್ನು ಸೋಂಕು ಹರಡದಂತೆ ಮಂಗಳವಾರ ಸ್ವಚ್ಛಗೊಳಿಸಲಾಗಿದೆ. ಈತ ಕೆಲಸ ಮಾಡುತ್ತಿದ್ದ ಕಚೇರಿಯ 25 ಸಹೋದ್ಯೋಗಿಗಳನ್ನು ಸಂಪರ್ಕಿಸಿ, ಪ್ರತಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಿ, ರಕ್ತದ ಮಾದರಿಯನ್ನು ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com