ಕೆಂಪೇಗೌಡ ವಿಮಾನ ನಿಲ್ದಾಣ: ಗುಪ್ತಾಂಗದಲ್ಲಿ 8 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ!; ಮಹಿಳೆ ಬಂಧನ

ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 8.3 ಕೋಟಿ ರೂ.ಗಳ ಮೌಲ್ಯದ 1.3 ಕೆಜಿ ಮಾದಕವಸ್ತು (ಕೊಕೇನ್) ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಗ್ವಾಟೆಮಾಲಾದ ಓರ್ವ ಮಹಿಳಾ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಇಲ್ಲಿ ಬಿಡುಗಡೆ ಮಾಡಿದ ಮಾಹಿತಿಯಂತೆ ಮಂಗಳವಾರ ರಾತ್ರಿ ಮಹಿಳೆ ಗ್ವಾಟೆಮಾಲನ್‌ನಿಂದ ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದ ಮೂಲಕ ಆಗಮಿಸಿದ್ದು, 1.3 ಕೆಜಿ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದಾಳೆ. ನಿಷೇಧಿತ ಮಾದಕ ವಸ್ತುವನ್ನು 150 ಮಾತ್ರೆಗಳಲ್ಲಿ(ಕ್ಯಾಪ್ಸೂಲ್ಸ್) ತುಂಬಿಸಿ ದೇಹದಲ್ಲಿ ಇಟ್ಟಿದ್ದ ಟ್ಯೂಬ್‌ ನೊಳಗೆ ಮಾತ್ರೆಗಳನ್ನು ನುಂಗಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾಳೆ. ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಾಣಿಕೆಯ ಮಹಿಳೆಯಿಂದ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭ ಗುಪ್ತಾಂಗದಲ್ಲಿ 150ಕ್ಕೂ ಹೆಚ್ಚು ಸಣ್ಣಸಣ್ಣ ಟ್ಯೂಬ್‌ ಮಾತ್ರೆಗಳ ರೀತಿಯಲ್ಲಿ ಶೇಖರಿಸಿಟ್ಟುಕೊಂಡಿದ್ದಳು. ಪ್ಲಾಸ್ಟಿಕ್‌ನಂತಹ ವಸ್ತುವಿನಿಂದ ಕವರ್‌ ಮಾಡಿದ ಕೊಕೇನ್‌ ಕ್ಯಾಪ್ಸೂಲ್‌ಗಳು ಒಟ್ಟು 1.385 ಗ್ರಾಂ ತೂಕ ಹೊಂದಿರುವುದಾಗಿ ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದಿಸ್‌ ಅಬಾಬಾದಿಂದ ವಿಮಾನ ಏರುವ ಮುಂಚೆಯೇ ಅಂದರೆ ಎರಡು ದಿನಗಳ ಮೊದಲೇ ತನ್ನ ಗುಪ್ತಾಂಗದಲ್ಲಿ ಕೊಕೇನ್‌ ಇರಿಸಿಕೊಂಡಿದ್ದಳು ಎನ್ನಲಾಗಿದೆ. ಎನ್‌ಡಿಪಿಎಸ್‌ ಕಾಯ್ದೆ ಅಡಿ ವಿದೇಶಿ ಮಹಿಳೆಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com