ಅಂತಾರಾಷ್ಟ್ರೀಯ ಮಹಿಳಾ ದಿನ: ಮುಖ್ಯಮಂತ್ರಿ ಸೇರಿ ಗಣ್ಯರ ಶುಭಾಶಯ

ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಸಿಎಂ ಬಿಎಸ್ ವೈ ಹಾಗೂ ಸಿದ್ದರಾಮಯ್ಯ
ಸಿಎಂ ಬಿಎಸ್ ವೈ ಹಾಗೂ ಸಿದ್ದರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಸದಾ ಹರಿವ ಸಹನೆಯ ನದಿ, ಬರಿದಾಗದ ಕರುಣೆಯ ಕಡಲು, ಮಮತೆಯ ಮಹಾಸಾಗರದ ಪ್ರತೀಕವೇ ಆಗಿರುವ ಸಮಸ್ತ ಮಹಿಳೆಯರಿಗೆ ವಿಶ್ವ ಮಹಿಳಾ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮಹಿಳಾ ದಿನದ ಶುಭಾಶಯ ಕೋರಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಇನ್ನು ಮಾಜಿ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕೂಡ ಮಹಿಳಾ ದಿನಾಚರಣೆ ಪ್ರಯುಕ್ತ ಟ್ವೀಟ್ ಮಾಡಿದ್ದು, 'ಸ್ವಾತಂತ್ರ್ಯ ಮತ್ತು ಸಮಾನತೆಯ ಮೂಲಕ ಮಹಿಳೆಯರಿಗೆ ಸಮಪಾಲು-ಸಮಬಾಳು ನೀಡಿದರೆ ಮಾತ್ರ ಪುರುಷಪ್ರದಾನ ವ್ಯವಸ್ಥೆಯನ್ನು ಮನುಷ್ಯಪ್ರಧಾನ ವ್ಯವಸ್ಥೆಯನ್ನಾಗಿ ಪರಿವರ್ತಿಸಲು ಸಾಧ್ಯ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com