ರೈತರ ಸಂಕಷ್ಟ ನಿವಾರಿಸಲು ಸರ್ಕಾರ ಬದ್ಧ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ರೈತರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿರುವುದಾಗಿ ಪುನರುಚ್ಚರಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಜೆಟ್ ನಲ್ಲಿ ರೈತರಿಗೆ ಗರಿಷ್ಟ ಬೆಂಬಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಹೊನ್ನಾಳ್ಳಿ:  ರೈತರ ಹಿತಾಸಕ್ತಿಯನ್ನು ಕಾಪಾಡಲು ಸರ್ಕಾರ ಬದ್ಧವಾಗಿರುವುದಾಗಿ ಪುನರುಚ್ಚರಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಜೆಟ್ ನಲ್ಲಿ ರೈತರಿಗೆ ಗರಿಷ್ಟ ಬೆಂಬಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮೂರು ದಿನಗಳಿಂದ ನಡೆದ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್ಥಿಕ ಬಿಕ್ಕಟ್ಟಿನ ನಡುವೆಯೂ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲು  5 ಸಾವಿರ ಕೋಟಿ ಹಣವನ್ನು ಸರ್ಕಾರ ಮೀಸಲಿಟ್ಟಿದೆ. ಅಗತ್ಯಬಿದ್ದರೆ ನೀರಾವರಿ ಯೋಜನೆಗಾಗಿ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು.

ಮಳೆಗಾಲ ಸಂದರ್ಭದಲ್ಲಿನ ಪ್ರವಾಹದ ನೀರನ್ನು ಕೆರೆಗಳಿಗೆ ತುಂಬಿಸುವ ಮೂಲಕ ಕೃಷಿ ಉದ್ದೇಶಕ್ಕೆ ಲಭ್ಯವಾಗುವಂತೆ ಮಾಡಲಾಗುವುದು . ಕೃಷಿಗೆ ಬೆಂಬಲ ಬೆಲೆ ನೀಡಲು ಸರ್ಕಾರ ಹಣವನ್ನು ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.

 ರೈತರು ಸ್ವಾತಂತ್ರ್ಯ ಬಂದಾಗಿನಿಂದಲೂ ಯಾತನೆ ಅನುಭವಿಸುತ್ತಿದ್ದಾರೆ. ಅದರಿಂದ ಅವರನ್ನು ಹೊರಗೆ ತರಲಾಗುವುದು, ಅದಕ್ಕಾಗಿ ರೈತರಿಗೆ ಬೆಂಬಲ ಬೆಲೆ ನೀಡಲಾಗುವುದು ಎಂದು ಹೇಳಿದ ಯಡಿಯೂರಪ್ಪ, ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com