ಕೊರೋನಾ ಭೀತಿ: ನಾಳೆಯಿಂದ ಬೆಂಗಳೂರಿನ LKG, UKG ಶಾಲೆಗಳಿಗೆ ರಜೆ

ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್‌ಕೆಜಿ,  ಯುಕೆಜಿ) ಗಳಿಗೆ ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾರಕ ಕೊರೋನಾ ಭೀತಿಯ ಹಿನ್ನೆಲೆ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೂರ್ವ ಪ್ರಾಥಮಿಕ ಶಾಲೆ (ನರ್ಸರಿ, ಎಲ್‌ಕೆಜಿ,  ಯುಕೆಜಿ) ಗಳಿಗೆ ನಾಳೆಯಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.

ಮೂರು ಜಿಲ್ಲೆಯ ಸರ್ಕಾರಿ, ಅನುದಾನಿತ ಃಆಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂಯುಕೆಜಿಗಳಿಗೆ ಮುಂಜಾಗ್ರತಿ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ..

"ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ LKG, UKG ಶಾಲೆಗಳಿಗೆ  ನಾಳೆಯಿಂದ ರಜೆ ಘೋಷಿಸಲಾಗಿದೆ." ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ನಲ್ಲಿ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com