ಬೆಂಗಳೂರಿನಲ್ಲಿ ಕೊರೋನಾ ಪತ್ತೆ: ನರ್ಸರಿ, ಐದನೇ ತರಗತಿವರೆಗಿನ ಶಾಲೆಗಳಿಗೆ ರಜೆ ಸಾರಿದ ಸರ್ಕಾರ

ರಾಜ್ಯದ ಮೊದಲ್ ಕೊರೋನಾ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯ ನರ್ಸರಿ, ಪೂರ್ವ ಪ್ರಾಥಮಿಕ ಹಾಗೂ ಐದನೇ ತರಗತಿ ವರೆಗಿನ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಸಾರಿ ಸರ್ಕಾರ ಆದೇಶಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಮೊದಲ್ ಕೊರೋನಾ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆಯಾಗಿರುವ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯ ನರ್ಸರಿ, ಪೂರ್ವ ಪ್ರಾಥಮಿಕ ಹಾಗೂ ಐದನೇ ತರಗತಿ ವರೆಗಿನ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಸಾರಿ ಸರ್ಕಾರ ಆದೇಶಿಸಿದೆ.

"ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ನಗರ ಜಿಲ್ಲೆ,  ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ."  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ಟ್ವೀಟ್ ಮಾಡಿದ್ದಾರೆ.

ಮಾ.01 ರಂದು ಅಮೆರಿಕದಿಂದ ಬೆಂಗಳುರಿಗೆ ಬಂದಿದ್ದ 40 ವರ್ಷದ ಇಂಜಿನಿಯರ್ ಗೆ ಕೊರೋನಾ ಸೋಂಕು ತಗುಲಿದ್ದು, ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೆರಿಕಾದಿಂದ ಬಂದಿದ್ದ ಇಂಜಿನಿಯರ್ ಜೊತೆಗೆ ಪ್ರಯಾಣಿಸಿದ್ದವರ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com