ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಹೆಚ್ಚುವರಿ ಆರೋಗ್ಯ ವಿಮೆ ನೀಡಲು ಸರ್ಕಾರ ಚಿಂತನೆ

ಕೊರೋನಾ ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಪ್ರಯೋಗಾಲದಲ್ಲಿ ಕೆಲಸ ಮಾಡುವವರಿಗೆ ಹೆಚ್ಚುವರಿ ಆರೋಗ್ಯ ವಿಮೆ ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ.
ಕೆ. ಸುಧಾಕರ್
ಕೆ. ಸುಧಾಕರ್

ಬೆಂಗಳೂರು: ಕೊರೋನಾ ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಪ್ರಯೋಗಾಲದಲ್ಲಿ ಕೆಲಸ ಮಾಡುವವರಿಗೆ ಹೆಚ್ಚುವರಿ ಆರೋಗ್ಯ ವಿಮೆ ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ.

ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದ್ದು, ಕೊವಿಡ್ 19 ಪ್ರಕರಣಗಳಿಗೆ ಚಿಕಿತ್ಸೆ ನೀಡುವಾಗ ಆರೋಗ್ಯ ಇಲಾಖೆ ರೂಪಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಸಚಿವರು ಹೇಳಿದರು.

ಇಂದು ಬೆಂಗಳೂರು ವೈದ್ಯಕೀಯ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕೊರೋನಾ ವೈರಸ್ ತಪಾಸಣೆ ನಡೆಸುವ ಪ್ರಯೋಗಾಲವನ್ನು ಉದ್ಘಾಟಿಸಿ ಮಾತನಾಡಿದ ಸುಧಾಕರ್ ಅವರು, ಪ್ರಯೋಗಾಲಯ ಮತ್ತು ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿಗೆ ಸದ್ಯ ಇರುವ ಆರೋಗ್ಯ ವಿಮೆಯ ಹೊರತಾಗಿ ಹೆಚ್ಚುವರಿ ಆರೋಗ್ಯ ವಿಮೆ ಒದಗಿಸುವ ಚಿಂತನೆ ಇದೆ ಎಂದರು.

ವೈದ್ಯಕೀಯ ಸಿಬ್ಬಂದಿ ಮೊದಲು ನಿಮ್ಮನ್ನು ನೀವು ರಕ್ಷಿಸಿಕೊಳ್ಳಬೇಕು. ಹೀಗಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಯಾವುದೇ ನಿರ್ಲಕ್ಷ ತೋರಬೇಡಿ ಎಂದು ಸಚಿವರು ಸಲಹೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com