ನೆರೆ ಸಂಕಷ್ಟ: ಕೇಂದ್ರದಿಂದ ಮತ್ತಷ್ಟು ಪರಿಹಾರ ಪಡೆಯುವ ವಿಶ್ವಾಸದಲ್ಲಿ ರಾಜ್ಯ

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯ ಸರ್ಕಾರ ನೆರೆ ಸಂಕಷ್ಟ ಎದುರಿಸಲು ಕೇಂದ್ರ ಸರ್ಕಾರದಿಂದ ಮತ್ತಷ್ಟು ಪರಿಹಾರ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. 
ಸದಾನಂದ ಗೌಡ
ಸದಾನಂದ ಗೌಡ

ಬೆಂಗಳೂರು: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯ ಸರ್ಕಾರ ನೆರೆ ಸಂಕಷ್ಟ ಎದುರಿಸಲು ಕೇಂದ್ರ ಸರ್ಕಾರದಿಂದ ಮತ್ತಷ್ಟು ಪರಿಹಾರ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ. 

ಈ ಕುರಿತಂತೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಸದಾನಂದ ಗೌಡ ಅವರು, ವಿತ್ತ ಸಚಿವಾಲಯಕ್ಕೆ ಈಗಾಗಲೇ ಪತ್ರ ಪಡೆಯಲಾಗಿದ್ದು, ರಾಜ್ಯದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ರಾಜ್ಯಕ್ಕೆ ಮತ್ತಷ್ಟು ಪರಿಹಾರ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ನೆರೆ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ರೂ.5,400 ಕೋಟಿ ಬಿಡುಗಡೆ ನೀಡಿದ್ದು, ಶೀಘ್ರಗತಿಯಲ್ಲಿ ಈ ಹಣವನ್ನು ಬಿಡುಗಡೆ ಮಾಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆಯಲಾಗಿದ. ಕೇಂದ್ರ ಹಣಕಾಯು ಆಯೋಗ ಸ್ವಾಯತ್ತ ಸಂಸ್ಥೆಯಾಗಿರುವುದರಿಂದ ಸರ್ಕಾರಕ್ಕೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಜನಸಂಖ್ಯೆದ ಆಧಾರದ ಮೇಲಷ್ಟೇ ಅವರು ಹಣವನ್ನು ಹಂಚಿಕೆ ಮಾಡುತ್ತಾರೆ. ರಾಜ್ಯಗಳಿಗೆ ಹಣ ಹಂಚಿಕೆ ಮಾಡುವುದರಲ್ಲಿ ಕಡಿತ ಮಾಡಲಾಗಿದೆ. ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳ ಅನುದಾನ ಹಂಚಿಕೆಯಲ್ಲಿ ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com