ರಾಜ್ಯದ ಮೂಲೆಮೂಲೆಗೂ ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ: ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಳಗಾವಿ:  ಬೆಳಗಾವಿ ಜಿಲ್ಲಾಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಜಲ ಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಲ್ಲಾಯ ರಾಯಬಾಗ ತಾಲೂಕಿನ ಜಲಾಲಪೂರ- ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ 33 ಕೋಟಿ ರೂ.ವೆಚ್ಚದ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ರಾಯಬಾಗ ತಾಲೂಕಿನ ದಿಗ್ಗೆವಾಡಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
 
ಆಲಮಟ್ಟಿ ಎತ್ತರ ಹೆಚ್ಚಿಸಲು ಹಾಗೂ ಪುನರ್ವಸತಿ ಗೆ ಸಾವಿರಾರು ಕೋಟಿ ಅಗತ್ಯವಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಡಾ.ಪ್ರಭಾ ಕೋರೆ ನೇತೃತ್ವದಲ್ಲಿ ತಂಡವಾಗಿ ಕೆಲಸ ಮಾಡುವುದಾಗಿ ಸಚಿವ ಜಾರಕಿಹೊಳಿ ಭರವಸೆ ನೀಡಿದರು. 

ಬೇಸಿಗೆ ಕಾಲದಲ್ಲಿ ಪ್ರತಿವರ್ಷ ಮಹಾರಾಷ್ಟ್ರಕ್ಕೆ ನೀರಿಗಾಗಿ ಮನವಿ ಮಾಡಿಕೊಳ್ಳುವ ಪರಿಸ್ಥಿತಿ ಇದೆ. ಈಗಾಗಲೇ ಸ್ಥಗಿತಗೊಂಡಿರುವ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ನೆರವಾಗಬೇಕು.  ಆ ನಿಟ್ಟಿನಲ್ಲಿ  ಮಹಾರಾಷ್ಟರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. 

ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿಗಾಗಿ ಪರಿತಪಿಸುವ ಪರಿಸ್ಥಿತಿಯಿದೆ. ಆದ್ದರಿಂದ ಮಳೆಗಾಲದಲ್ಲಿ ಹರಿಯುವ ನೀರು ಹಿಡಿದಿಡಲು ಮಹಾರಾಷ್ಟ್ರದ ಮಾದರಿಯಲ್ಲಿ ಪ್ರತಿ ಐದು ಅಥವಾ ಹತ್ತು ಕಿಲೋಮೀಟರ್ ಗೆ ಒಂದು ಬಾಂದಾರ ನಿರ್ಮಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com